ಹುಚ್ಚು ಪ್ರೇಮಿಯ ಕಾಟ ತಾಳಲಾರದೆ ಬಾಲಕಿ ಆತ್ಮಹತ್ಯೆ
ಹುಚ್ಚು ಪ್ರೇಮಿಯ ಕಾಟ ತಾಳಲಾರದೆ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಜಗಜೀವನ್ ರಾಮ್ ನಗರದಲ್ಲಿ ಶನಿವಾರ ನಡೆದಿದೆ...

ಬೆಂಗಳೂರು: ಹುಚ್ಚು ಪ್ರೇಮಿಯ ಕಾಟ ತಾಳಲಾರದೆ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಜಗಜೀವನ್ ರಾಮ್ ನಗರದಲ್ಲಿ ಶನಿವಾರ ನಡೆದಿದೆ.
ಸೌಂದರ್ಯ (15) ಮೃತ ಬಾಲಕಿ. ಕಳೆದ ಹಲವು ದಿನಗಳಿಂದಲೂ ಬಾಲಕಿಯ ಹಿಂದೆ ಬಿದ್ದಿದ್ದ ಪ್ರವೀಣ್ ಎಂಬ ಯುವಕ ಮಾರ್ಚ್ 17 ರಂದು ಪ್ರೀತಿ ಮಾಡದಿದ್ದರೆ ಆ್ಯಸಿಡ್ ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಬೇಸತ್ತಿದ್ದ ಬಾಲಕಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ.
ಬೆಂಕಿಯ ಉರಿ ತಾಳಲಾರದೆ ಬಾಲಕಿ ಕಿರುಚಾಡುತ್ತಿದ್ದುದ್ದನ್ನು ಕಂಡ ಸ್ಥಳೀಯರು ಬಾಲಕಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ನಿನ್ನೆ ಸಾವನ್ನಪ್ಪಿದ್ದಾಳೆಂದು ತಿಳಿದುಬಂದಿದೆ.
ಪ್ರಸ್ತುತ ಬಾಲಕಿಯ ಪೋಷಕರು ಪ್ರವೀಣ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಮಗಳಿಗೆ ಪ್ರವೀಣಿ ಸಾಕಷ್ಟು ಬಾರಿ ತೊಂದರೆ ನೀಡಿದ್ದಾನೆ. ಕಾಟ ತಾಳಲಾರದೆ ಆತ್ಮಹತ್ಯೆ ಶರಣಾಗಿದ್ದಾಳೆಂದು ಪೊಷಕರು ಹೇಳಿಕೊಂಡಿದ್ದಾರೆ.
ಇದೀಗ ಸ್ಥಳಕ್ಕಾಗಮಿಸಿರುವ ಜಗಜೀವನ್ ರಾಮ್ ನಗರದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಪ್ರವೀಣ್'ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


