ಪೊಲೀಸ್ ಠಾಣೆಗೆ ವಿಚಾರಣೆಗೆಂದು ಹಾಜರಾಗಿದ್ದ ವ್ಯಕ್ತಿ ಸಾವು: 5 ಪೊಲೀಸರ ಅಮಾನತು
ವಿಚಾರಣೆಗೆಂದು ಪೊಲೀಸ್ ಠಾಣೆಗೆ ಹಾಜರಾಗಿದ್ದ ಜಾರ್ಖಂಡ್ ಮೂಲದ ಆರೋಪಿ ಅನುಮಾನಸ್ಪದವಾಗಿ ಸಾವನ್ನಪ್ಪಿದ...

Published On :
ಬೆಂಗಳೂರು: ವಿಚಾರಣೆಗೆಂದು ಪೊಲೀಸ್ ಠಾಣೆಗೆ ಹಾಜರಾಗಿದ್ದ ಜಾರ್ಖಂಡ್ ಮೂಲದ ಆರೋಪಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಹಿನ್ನಲೆಯಲ್ಲಿ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ಉದ್ಯಮಿ ಮನೆಯಲ್ಲಿ ನಡೆದ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವನ್ ಭೀಮಾನಗರ ಪೊಲೀಸ್ ಠಾಣೆಗೆ ಜಾರ್ಖಂಡ್ ಮೂಲದ ಆರೋಪಿ ಮಹೇಂದ್ರ ರಾಥೋಡ್ (42)ರನ್ನು ಕರೆತರಲಾಗಿತ್ತು. ಆದರೆ, ವಿಚಾರಣೆ ವೇಳೆ ಆ ವ್ಯಕ್ತಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆಯಿಂದ ಮಹೇಂದ್ರ ಮೃತಪಟ್ಟಿದ್ದಾರೆ ಎಂದು ಠಾಣಾ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ಕಳೆದ 12 ವರ್ಷಗಳಿಂದ ರಾಥೋಡ್ ಪುರೋಹಿತ್ ಎಂಬುವವರ ಮನೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಶನಿವಾರ ಪುರೋಹಿತ್ ಅವರು ರಾಥೋಡ್ ತಮ್ಮ ಮನೆಯಲ್ಲಿ 3.5 ಲಕ್ಷ ಹಣವನ್ನು ಕದ್ದಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ರಾಥೋಡ್ ನನ್ನು ಕರೆತಂದು ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ರಾಥೋಡ್ ಮೃತಪಟ್ಟಿದ್ದಾರೆ.
ಆದರೆ, ವಿಷಯ ತಿಳಿದ ರಾತ್ರಿಯೇ ಠಾಣೆಗೆ ಭೇಟಿಕೊಟ್ಟ ಪೊಲೀಸ್ ಆಯುಕ್ತ ಎನ್ ಎಸ್ ಮೇಘರಿಖ್ ಮತ್ತು ಹಿರಿಯ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದಾಗ ಅನುಮಾನಗಳು ಕಂಡುಬಂದಿವೆ. ಈ ಹಿನ್ನಲೆಯಲ್ಲಿ ಪ್ರಕರಣದ ತನಿಖೆಯನ್ನು ಸಿಐಡಿ ಒಪ್ಪಿಸಿ ಐವರು ಪೊಲೀಸರನ್ನು ಅಮಾನತುಗೊಳಿಸಿದ್ದಾರೆ.
ಜೆಬಿನಗರ ಇನ್ಸ್ ಪೆಕ್ಟರ್ ಹಿತೇಂದ್ರ, ಸಬ್ ಇನ್ಸ್ ಪೆಕ್ಟರ್ ರಾಜಶೇಖರ್, ಹೆಡ್ ಕಾನ್ಸ್ ಟೆಬಲ್ ಏಜಾಜ್ ಅಹ್ಮದ್ ಮತ್ತು ಕಾನ್ಸ್ ಟೆಬಲ್ ಗಳಾದ ಸಿದ್ದಪ್ಪ, ಮೋಹನ್ ರಾಮ್, ಕೇಶವ್ ಮೂರ್ತಿ ಅಮಾನತುಗೊಂಡುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


