ಚಿನ್ನದ ಅಂಬಾರಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಸುಪ್ರೀಂನಲ್ಲಿ ಮೇಲ್ಮನವಿ
ಮೈಸೂರಿನ ಚಿನ್ನದ ಅಂಬಾರಿ ರಾಜ ಮನೆತನದ ಬಳಿಯಿದ್ದು, ಅದನ್ನು ಸರ್ಕಾರ ತನ್ನ ಸುಪರ್ದಿಗೆ ಪಡೆಯಬೇಕೆಂದು ಇತಿಹಾಸ ತಜ್ಞ ಪ್ರೊಫೆಸರ್ ...

ಮೈಸೂರು : ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಚಿನ್ನದ ಅಂಬಾರಿ ರಾಜ ಮನೆತನದ ಬಳಿಯಿದ್ದು, ಅದನ್ನು ಸರ್ಕಾರ ತನ್ನ ಸುಪರ್ದಿಗೆ ಪಡೆಯಬೇಕೆಂದು ಇತಿಹಾಸ ತಜ್ಞ ಪ್ರೊಫೆಸರ್ ಪಿ.ವಿ.ನಂಜರಾಜ ಅರಸ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.
ರಾಜಮನೆತನದ ವಶದಲ್ಲಿರುವ ಚಿನ್ನದ ಅಂಬಾರಿಯನ್ನು ಸರ್ಕಾರದ ವಶಕ್ಕೆ ನೀಡಬೇಕೆಂದು ನಂಜರಾಜ ಅರಸ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡ ಹಿನ್ನಲೆಯಲ್ಲಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದಾರೆ.
1998 ರ ಕಾಯ್ದೆಯಡಿ ಅಂಬಾರಿಯನ್ನು ಸರ್ಕಾರ ಸುಪರ್ದಿಗೆ ಪಡೆಯಬೇಕು ಮತ್ತು ದಸರಾ ವೇಳೆ ಜಿಲ್ಲಾಡಳಿತ ರಾಜಮನೆತನಕ್ಕೆ ನೀಡುವ ಗೌರವ ಧನ ರದ್ದು ಮಾಡಬೇಕೆಂದು ನಂಜರಾಜ್ ಅರಸ್ ಅವರು ಹೈಕೋರ್ಟ್‌ನಲ್ಲಿ ಕಳೆದ ವರ್ಷ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್ ಅರ್ಜಿಯನ್ನು ವಜಾ ಗೊಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


