ರಾಜ್ಯ

ಮಂಗಳೂರಿನಲ್ಲಿ ಆರ್ ಟಿ ಐ ಕಾರ್ಯಕರ್ತನ ಹತ್ಯೆ

ಆರ್ ಟಿಐ ಕಾರ್ಯಕರ್ತರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಸೋಮವಾರ ಬೆಳಗ್ಗೆ ಮಂಗಳೂರಿನಲ್ಲಿ ನಡೆದಿದೆ...

ಮಂಗಳೂರಿನಲ್ಲಿ ಆರ್ ಟಿ ಐ ಕಾರ್ಯಕರ್ತನ ಹತ್ಯೆ
ವಿನಾಯಕ ಬಾಳಿಗ
Published On :

ಮಂಗಳೂರು:  ಆರ್ ಟಿಐ ಕಾರ್ಯಕರ್ತರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಸೋಮವಾರ  ಬೆಳಗ್ಗೆ ಮಂಗಳೂರಿನಲ್ಲಿ ನಡೆದಿದೆ.

ವಿನಾಯಕ  ಪಾಂಡುರಂಗ ಬಾಳಿಗ (50) ಎಂಬವರು ಬೆಳಗ್ಗೆ 5.30ರ ವೇಳೆಗೆ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಬೆಸೆಂಟ್ ಕಾಲೇಜು ಬಳಿ  ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಾಳಿಗ ಅವರನ್ನು ಕೊಚ್ಚಿ ಕೊಲೆ ಮಾಡಿದ್ದಾರೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಾಳಿಗ ಅವರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರು. ಆದರೆ ಅಷ್ಟರಲ್ಲಾಗಲೇ ಬಾಳಿಗ ಅವರು ಸಾವನ್ನಪ್ಪಿದ್ದರು.

ನಗರದಲ್ಲಿ ಅಕ್ರಮವಾಗಿ ನಿರ್ಮಾಣವಾಗುತ್ತಿದ್ದ ಕಟ್ಟಡಗಳ ಬಗ್ಗೆ ಬಾಳಿಗ ಮಾಹಿತಿ ಕಲೆ ಹಾಕುತ್ತಿದ್ದರು. ಹೀಗಾಗಿ ಅವರಿಗೆ ಅನೇಕ ಬಿಲ್ಡರ್ಸ್ ಗಳಿಂದ ಬೆದರಿಕೆ ಕರೆ ಬಂದಿದ್ದವು ಎನ್ನಲಾಗಿದೆ. ಹತ್ಯೆಯ ಹಿಂದೆ ಬೆದರಿಕೆ ಹಾಕಿದ್ದವರ ಕೈವಾಡ ಇದೆಯಾ ಎಂಬುದರ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.

ಇನ್ನು ಕೆಲವರ ಪ್ರಕಾರ ನಗರದ ಹೃದಯ ಭಾಗದಲ್ಲಿರುವ ದೇವಾಸ್ಥಾನದ ಹಣವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದುದ್ದರ ಬಗ್ಗೆ  ಮಾಹಿತಿ ಸಂಗ್ರಹಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಇನ್ನು ಕೊಲೆಯಾದ ಸ್ಥಳದಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ಅವುಗಳ ವಿಡಿಯೋ ಪರಿಶೀಲನೆ ನಡೆಸುವುದಾಗಿ ಬಾರ್ಕೆ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.