ಯಲ್ಲಾಪುರ ಬಳಿ ಮರಕ್ಕೆ ಕಾರು ಡಿಕ್ಕಿ: ನಿವೃತ್ತ ಐಎಎಸ್ ಅಧಿಕಾರಿ ಸೇರಿ 3 ಸಾವು
ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಐಎಎಸ್ ಅಧಿಕಾರಿ ಸೇರಿದಂತೆ ಒಂದೇ ಕುಟಂಬದ ಮೂವರು ಸ್ಥಳದಲ್ಲೇ...

Published On :
ಯಲ್ಲಾಪುರ: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಐಎಎಸ್ ಅಧಿಕಾರಿ ಸೇರಿದಂತೆ ಒಂದೇ ಕುಟಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರುವತ್ತಿ ಬಳಿ ನಡೆದಿದೆ.
ಯಲ್ಲಾಪುರದಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮಹಾರಾಷ್ಟ್ರದ ನಿವೃತ್ತ ಐಎಎಸ್ ಅಧಿಕಾರಿ 64 ವರ್ಷದ ದತ್ತಾತ್ರೇಯ ಬನ್ಸೋಡ್ ಸೇರಿ ಮೂವರು ಮೃತಪಟ್ಟಿದ್ದಾರೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


