ಆರ್ ಟಿ ಐ ಕಾರ್ಯಕರ್ತನ ಹತ್ಯೆ ಪ್ರಕರಣ: ಇಬ್ಬರ ಬಂಧನ
ಮಾಹಿತಿ ಹಕ್ಕು (ಆರ್ ಟಿಐ) ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ...

Published On :
ಮಂಗಳೂರು: ಮಾಹಿತಿ ಹಕ್ಕು (ಆರ್ ಟಿಐ) ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಭಾನುವಾರ ಬೆಳಿಗ್ಗೆ ಬಂಧಿಸಿದ್ದಾರೆ.
ಆರ್ ಟಿಐ ಕಾರ್ಯಕರ್ತ ಕೊಡಿಯಾಲ್ ಬೈಲ್ ನ ವಿನಾಯಕ ಪಾಂಡುರಂಗ ಬಾಳಿಗಾ ಅವರನ್ನು ಸುಪಾರಿ ಪಡೆದು ಕೊಲೆ ಮಾಡಲಾಗಿತ್ತು. ಇದನ್ನು ಖಚಿತಪಡಿಸಿಕೊಂಡ ಪೊಲೀಸರು ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ಇಬ್ಬರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಗರದ ಕಾವೂ ಬಳಿಯ ಬಟ್ರೆಕುಮೇರು ಪದವಿನಂಗಡಿ ನಿವಾಸಿ ವಿನೀತ್ ಪೂಜಾರಿ(26) ಮತ್ತು ಶಕ್ತಿನಗರದ ಕೆವಿಎಸ್ ಗೋಡಂಬಿ ಕಾರ್ಖಾನೆ ಬಳಿಯ ನಿಶೀತ್ ದೇವಾಡಿಗ(23) ಬಂಧಿತ ಆರೋಪಿಗಳು.
ಈ ಸಂಬಂಧ ಮಾತನಾಡಿದ ಪೊಲೀಸ್ ಆಯುಕ್ತ ಎಂ ಚಂದ್ರಶೇಖರ್, ಹತ್ಯೆ ಸುಪಾರಿ ನೀಡಿದವರ್ಯಾರು ಎಂದು ಇನ್ನು ತಿಳಿದು ಬಂದಿಲ್ಲ. ಇನ್ನು ಹಲವು ಆರೋಪಿಗಳು ಈ ಪ್ರಕರಣದಲ್ಲಿ ಭಾಗಿಯಾಗಿದ್ದು, ಅವರನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


