ರಾಜ್ಯ

ಸಾಲಬಾಧೆ: ಪಾವಗಡದಲ್ಲಿ ರೈತ ಆತ್ಮಹತ್ಯೆ

ಸಾಲಬಾಧೆಯಿಂದ ಬೇಸತ್ತು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಪಾವಗಡದಲ್ಲಿ...

ಸಾಲಬಾಧೆ: ಪಾವಗಡದಲ್ಲಿ ರೈತ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Published On :
ತುಮಕೂರು: ಸಾಲಬಾಧೆಯಿಂದ ಬೇಸತ್ತು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಪಾವಗಡದಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನಲ್ಲಿರುವ ಹೊಟ್ಟೆ ಬೊಮ್ಮನಹಳ್ಳಿಯ ರೈತ ತಿಪ್ಪೆಸ್ವಾಮಿ(52) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
7 ಎಕರೆ ಜಮೀನು ಹೊಂದಿದ್ದ ತಿಪ್ಪೆಸ್ವಾಮಿ, ಎರಡು ಕೊಳವೆ ಬಾವಿ ಕೊರೆಸಿದ್ದರು. ಆದರೆ, ನೀರು ಸಿಗಲಿಲ್ಲ. ಕೊಳವೆ ಬಾವಿ ಕೊರೆಸಲು ರು.3.5 ಲಕ್ಷ ಸಾಲ ಮಾಡಿದ್ದರು. ಸಾಲ ತೀರಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ತನ್ನ ಜಮೀನಿನಲ್ಲೇ ವಿಷ ಸೇವಿಸಿದ್ದಾರೆ. ಇದನ್ನು ಕಂಡ ಗ್ರಾಮಸ್ಥರು ತಿಪ್ಪೆಸ್ವಾಮಿಯನ್ನು ಆಸ್ಪತ್ರೆಗೆ ಕರೆದೊಯ್ಯಬೇಕಾದರೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.