ರಾಜ್ಯ

ಆರ್‌ಎಸ್‌ಎಸ್‌ ರಾಜು ಹತ್ಯೆ ಪ್ರಕರಣ: ನ್ಯಾಯಾಂಗ ತನಿಖೆಗೆ ನಿರಾಕರಿಸಿದ ಸರ್ಕಾರ

ಮೈಸೂರಿನಲ್ಲಿ ನಡೆದ ಬಿಜೆಪಿ, ಆರ್‌ಎಸ್ಎಸ್ ಕಾರ್ಯಕರ್ತ ರಾಜು ಕೊಲೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು...

ಆರ್‌ಎಸ್‌ಎಸ್‌ ರಾಜು ಹತ್ಯೆ ಪ್ರಕರಣ: ನ್ಯಾಯಾಂಗ ತನಿಖೆಗೆ ನಿರಾಕರಿಸಿದ ಸರ್ಕಾರ
ಜಿ ಪರಮೇಶ್ವರ್- ಮುಖ್ಯಮಂತ್ರಿ ಸಿದ್ದರಾಮಯ್ಯ
Published On :
ಬೆಂಗಳೂರು: ಮೈಸೂರಿನಲ್ಲಿ ನಡೆದ ಬಿಜೆಪಿ, ಆರ್‌ಎಸ್ಎಸ್ ಕಾರ್ಯಕರ್ತ ರಾಜು ಕೊಲೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂಬ ಬಿಜೆಪಿ ಬೇಡಿಕೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ. 
ಆರ್‌ಎಸ್‌ಎಸ್‌ ರಾಜು ಕೊಲೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ ನಾಯಕ ಸಿಟಿ ರವಿ ವಿಧಾನಸಭೆಯಲ್ಲಿ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಯಿಸಿದ ಗೃಹ ಸಚಿವ ಜಿ ಪರಮೇಶ್ವರ್, ರಾಜು ಕೊಲೆ ಪ್ರಕರಣದ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಗೆ ಈ ತಂಡ ಭೇಟಿ ನೀಡಿ ಹಂತಕರ ಬಗ್ಗೆ ಮಾಹಿತಿ ಕಲೆ ಹಾಕಿದ್ದು, 64 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿದೆ ಎಂದು ತಿಳಿಸಿದ್ದಾರೆ. 
ಕೊಲೆ ಮಾಡಿದ ಅಪರಾಧಿಗಳನ್ನು ಯಾವುದೇ ಕಾರಣಕ್ಕೂ ರಕ್ಷಿಸುವುದಿಲ್ಲ. ಅಪರಾಧಿಗಳಿಗೆ ತಕ್ಕ ಶಿಕ್ಷೆ ನೀಡಲಾಗುವುದು ಎಂದ ಅವರು, ರಾಜು ಕುಟುಂಬ ಸದಸ್ಯರಿಗೆ ಸರ್ಕಾರಿ ನೌಕರಿ ನೀಡುವುದರ ಕುರಿತು ಚಿಂತಿಸಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.