ರಾಜ್ಯ

ಶಿಕ್ಷಕರ ಎಚ್ಚರಿಕೆಯಿಂದ ಆತಂಕಗೊಂಡ ಬಾಲಕ ಆತ್ಮಹತ್ಯೆಗೆ ಶರಣು

ಶಾಲೆಯಲ್ಲಿ ಶಿಕ್ಷಕರು ನೀಡಿದ್ದ ಎಚ್ಚರಿಕೆಯಿಂದ ಆತಂಕಗೊಂಡು 9 ನೇ ತರಗತಿ ಓದುತ್ತಿದ್ದ 15 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಶಿಕ್ಷಕರ ಎಚ್ಚರಿಕೆಯಿಂದ ಆತಂಕಗೊಂಡ ಬಾಲಕ ಆತ್ಮಹತ್ಯೆಗೆ ಶರಣು
ಬಾಲಕ ಆತ್ಮಹತ್ಯೆಗೆ ಶರಣು (ಸಾಂಕೇತಿಕ ಚಿತ್ರ)
Published On :

ಬೆಂಗಳೂರು: ಶಾಲೆಯಲ್ಲಿ ಶಿಕ್ಷಕರು ನೀಡಿದ್ದ ಎಚ್ಚರಿಕೆಯಿಂದ ಆತಂಕಗೊಂಡು 9 ನೇ ತರಗತಿ ಓದುತ್ತಿದ್ದ 15 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಖಾಸಗಿ ಶಾಲೆಯಲ್ಲಿ 9 ತರಗತಿ ಓದುತ್ತಿದ್ದ ಬೆಂಗಳೂರಿನ ಆನಂದಪುರದ ನಿವಾಸಿ ರಾಜೇಂದ್ರ ಅವರ ಪುತ್ರ ಪಾರ್ಥಿವ್, 5 ವಿಷಯಗಳಲ್ಲಿ ಫೇಲ್ ಆಗಿದ್ದ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಿದ್ದ ಶಿಕ್ಷಕರು ಸರಿಯಾಗಿ ಓದದೇ ಇದ್ದರೆ ಶಾಲೆಯಿಂದ ಹೊರಹಾಕುವ ಎಚ್ಚರಿಕೆ ನೀಡಿದ್ದರು. ಇದರಿಂದ ಭಯಗೊಂಡ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.  

ಪೋಷಕರು ಮನೆಯಲ್ಲಿಲ್ಲದ ವೇಳೆ ಪಾರ್ಥಿವ್ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುವಂಡಿದೆ. ಈ ಸಂಬಂಧ ಜೇಬಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.