ರಾಘವೇಶ್ವರ ಶ್ರೀಗಳ ವಿರುದ್ಧ ಅತ್ಯಾಚಾರ ಪ್ರಕರಣ: ಆರೋಪ ಕೈ ಬಿಟ್ಟ ನ್ಯಾಯಾಲಯ
ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳಿಗೆ...

ಬೆಂಗಳೂರು: ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳಿಗೆ ದೊಡ್ಡ ಮುಕ್ತಿ ಸಿಕ್ಕಿದೆ. ಅವರ ವಿರುದ್ಧದ ಆರೋಪವನ್ನು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಗುರುವಾರ ಕೈಬಿಟ್ಟಿದೆ. ಇದರಿಂದ ಸುಮಾರು ಎರಡು ವರ್ಷಗಳಿಂದ ಶ್ರೀಗಳು ಮತ್ತು ಗಾಯಕಿ ನಡೆಸುತ್ತಿದ್ದ ಕಾನೂನು ಹೋರಾಟಕ್ಕೆ ಬ್ರೇಕ್ ಬಿದ್ದಂತಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳ ವಿರುದ್ಧ 2014ರ ಮಧ್ಯಭಾಗದಲ್ಲಿ ಗಾಯಕಿ ಪ್ರೇಮಲತಾ ಅತ್ಯಾಚಾರ ಆರೋಪ ಮಾಡಿದ್ದರು. ನಂತರ ನ್ಯಾಯಾಲಯದಲ್ಲಿ ಅನೇಕ ವಾದ-ವಿವಾದಗಳು ನಡೆದಿದ್ದವು.
ಪ್ರಕರಣವನ್ನು ಕೈ ಬಿಡುವಂತೆ ಕೋರಿ ರಾಘವೇಶ್ವರ ಭಾರತೀ ಸ್ವಾಮಿಗಳು ಅರ್ಜಿ ಸಲ್ಲಿಸಿದ್ದರು.ಅದನ್ನು ಪುರಸ್ಕರಿಸಿದ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಇಂದು ಅವರ ವಿರುದ್ಧದ ವಿಚಾರಣೆಯನ್ನು ಕೈಬಿಟ್ಟಿದೆ.
ಈ ಮಧ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸೆಷನ್ಸ್ ನ್ಯಾಯಾಧೀಶ ಜಿ.ಬಿ.ಮುದಿಗೌಡರ್ ಅವರನ್ನು ಬದಲಾಯಿಸಿ ಬೇರೊಬ್ಬ ನ್ಯಾಯಾಧೀಶರನ್ನು ನೇಮಿಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಲಾಗಿತ್ತು.
ಭಕ್ತರ ಹರ್ಷೋದ್ಘಾರ: ರಾಘವೇಶ್ವರ ಶ್ರೀಗಳ ಪರ ನ್ಯಾಯಾಲಯ ತೀರ್ಪು ನೀಡುತ್ತಿದ್ದಂತೆ ಅವರ ಭಕ್ತವೃಂದದ ಹರ್ಷ ಮುಗಿಲು ಮುಟ್ಟಿದೆ. ಬೆಂಗಳೂರಿನ ಗಿರಿನಗರ ಹಾಗೂ ಶಿವಮೊಗ್ಗದ ಮಠದ ಮುಂದೆ ನೆರೆದಿದ್ದ ಸಾವಿರಾರು ಭಕ್ತರು ಸಂಭ್ರಮದಿಂದ ಸತ್ಯಮೇವ ಜಯತೇ ಎಂದು ಘೋಷಣೆ ಕೂಗಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


