ಸುರಕ್ಷತೆಗಾಗಿ ಬೆಂಗಳೂರಿನಲ್ಲಿ 600 ಸಿಸಿಟೀವಿ ಅಳವಡಿಕೆ: ಸಚಿವ ಪರಮೇಶ್ವರ್
ಸುರಕ್ಷಿತಗಾಗಿ ನಗರಾದ್ಯಂತ 600ಕ್ಕೂ ಸಿಸಿಟೀವಿ ಕ್ಯಾಮೆರಾ ಅಳವಡಿಸಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್...

Published On :
ಬೆಂಗಳೂರು: ಸುರಕ್ಷಿತಗಾಗಿ ನಗರಾದ್ಯಂತ 600ಕ್ಕೂ ಸಿಸಿಟೀವಿ ಕ್ಯಾಮೆರಾ ಅಳವಡಿಸಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬೆಂಗಳೂರನ್ನು ಸುರಕ್ಷಿತ ನಗರವನ್ನಾಗಿಸಲು ನಗರಾದ್ಯಂತ 600ಕ್ಕೂ ಹೆಚ್ಚಿ ಸಿಸಿಟೀವಿ ಕ್ಯಾಮೆರಾವನ್ನು ಅಳವಡಿಸಲಾಗುತ್ತದೆ ಎಂದು ಹೇಳಿದ್ದಾರೆ.
ಸಿಸಿಟಿವಿ ಅಳವಡಿಕೆಗೆ ರು.43 ಕೋಟಿ ವೆಚ್ಚ ಮಾಡಲಾಗಿದ್ದು, ಸಿಸಿಟಿವಿಗಳು 24 ಪಿಟಿ ಝಡ್(360 ಡಿಗ್ರಿ)ನ ಅತ್ಯಾಧುನಿಕ ಮಟ್ಟದಾಗಿದೆ. ಇವುಗಳು 150 ಮೀಟರ್ ಸುತ್ತಳತೆಯಲ್ಲಿ ನಿಗಾವಹಿಸಲಿವೆ. ಅಷ್ಟೇ ಅಲ್ಲದೇ, ಮಳೆ ಬಂದರೂ ಅವುಗಳಲ್ಲಿ ತಾಂತ್ರಿಕ ಅಡಚಣೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಈಗಾಗಲೇ ಮೊದಲ ಹಂತದಲ್ಲಿ ನಗರದ ಕೇಂದ್ರ ಭಾಗದ 16 ಠಾಣಾ ವ್ಯಾಪ್ತಿಯಲ್ಲಿ 153 ಸಿಸಿಟೀವಿ ಕ್ಯಾಮೆರಾ ಅಳವಡಿಸಲಾಗಿದ್ದು, ಕ್ಯಾಮೆರಾಗಳ ನಿರ್ವಹಣೆಗೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರತ್ಯೇಕ ನಿರ್ವಹಣಾ ಕೇಂದ್ರ ಸ್ಥಾಪಿಸಲಾಗಿದೆ. ಪ್ರತ್ಯೇಕ ಠಾಣೆಗಳಲ್ಲಿ ಸಹ ಆ ಪ್ರದೇಶದ ಸಿಸಿಟಿವಿ ಕ್ಯಾಮೆರಾಗಳ ವೀಕ್ಷಣೆ ಮತ್ತು ದತ್ತಾಂಶ ಸಂಗ್ರಹಕ್ಕೂ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


