ಬೌರಿಂಗ್ ಆಸ್ಪತ್ರೆಯಿಂದ ನವಜಾತ ಶಿಶು ಕದ್ದಿದ್ದ ದಂಪತಿ ಬಂಧನ
ನಗರದ ಬೌರಿಂಗ್ ಆಸ್ಪತ್ರೆಯಿಂದ ಎರಡು ದಿನಗಳ ನವಜಾತ ಶಿಶುವನ್ನು ಕಳ್ಳತನ ಮಾಡಿದ್ದ ಇಬ್ಬರನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಬಂಧಿಸಿದ್ದಾರೆ...

ಬೆಂಗಳೂರು: ನಗರದ ಬೌರಿಂಗ್ ಆಸ್ಪತ್ರೆಯಿಂದ ಎರಡು ದಿನಗಳ ನವಜಾತ ಶಿಶುವನ್ನು ಕಳ್ಳತನ ಮಾಡಿದ್ದ ಇಬ್ಬರನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಬಂಧಿಸಿದ್ದಾರೆ.
ಡಿ.ಜೆ ಹಳ್ಳಿ ನಿವಾಸಿಗಳಾದ ಜಬೀನಾ ಮತ್ತು ಸೈಯ್ಯದ್ ನೂರುಲ್ಲಾ ಎಂಬುವರು ಅಕ್ಟೋಬರ್ 2015 ರಲ್ಲಿ ಬೌರಿಂಗ್ ಆಸ್ಪತ್ರೆಯಿಂದ 2 ದಿನಗಳ ನವಜಾತ ಶಿಶುವನ್ನು ಕದ್ದು ಪರಾರಿಯಾಗಿದ್ದರು.
ಆರು ತಿಂಗಳ ನಂತರ ಕೋಲಾರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದರ್ಗಾದಲ್ಲಿ ಭಾನುವಾರ ರಾತ್ರಿ ಇವರನ್ನು ಬಂಧಿಸಲಾಗಿದೆ. ಮಕ್ಕಳಿಲ್ಲದ ದಂಪತಿಯೊಬ್ಬರು ನವಜಾತ ಶಿಶುವನ್ನು ತಂದುಕೊಟ್ಟರೆ ಒಂದು ಲಕ್ಷ ಹಣ ನೀಡುವುದಾಗಿ ಹೇಳಿದ್ದರು. ಹಣದ ಆಮೀಷಕ್ಕಾಗಿ ಇವರು ಮಗು ಕಳ್ಳತನ ಮಾಡಿದ್ದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಇನ್ನು ಈ ಕಳ್ಳರು ಮಕ್ಕಳ ಅಪಹರಣ ಜಾಲದಲ್ಲಿ ಭಾಗಿಯಾಗಿರಬಹುದೆಂದು ಪೊಲೀಸರು ಭಾವಿಸಿದ್ದಾರೆ.
ಬೌರಿಂಗ್ ಆಸ್ಪತ್ರೆಯಲ್ಲಿ ಸೈಯ್ಯದ್ ಹಬೀಬ್ ಮತ್ತು ಫರೀದಾ ದಂಪತಿಯ 2 ದಿನಗಳ ಮಗುವನ್ನು ಜಬೀನಾ ಕದ್ದು ಪರಾರಿಯಾಗಿದ್ದಳು. ಈ ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


