ಸಚಿವ ಬಾಬುರಾವ್ ಚಿಂಚನಸೂರ್ ಮೇಲೆ 'ಕೈ' ಕಾರ್ಯಕರ್ತರಿಂದ ಹಲ್ಲೆಗೆ ಯತ್ನ
ಜವಳಿ ಖಾತೆ ಸಚಿವ ಬಾಬುರಾವ್ ಚಿಂಚನಸೂರ್ ಹಾಗೂ ಶಾಸಕ ಮಾಲಕರೆಡ್ಡಿ ಅವರ ಕಾರಿನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿ ಎಸೆದೆ ಘಟನೆ...

Published On :
ಯಾದಗಿರಿ: ಜವಳಿ ಖಾತೆ ಸಚಿವ ಬಾಬುರಾವ್ ಚಿಂಚನಸೂರ್ ಹಾಗೂ ಶಾಸಕ ಮಾಲಕರೆಡ್ಡಿ ಅವರ ಕಾರಿನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿ ಎಸೆದೆ ಘಟನೆ ಮಂಗಳವಾರ ಯಾದಗಿರಿಯಲ್ಲಿ ನಡೆದಿದೆ.
ಯಾದಗಿರಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಸಂಬಂಧ ಸಚಿವ ಹಾಗೂ ಶಾಸಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಅವರ ಕಾರಿನ ಮೇಲೆ ಕುರ್ಚಿ ಎಸೆದು, ಹಲ್ಲೆಗೆ ಯತ್ನಿಸಿದರು. ಆದರೆ ಭದ್ರತಾ ಸಿಬ್ಬಂದಿ ಕಾರ್ಯಕರ್ತರನ್ನು ತಡೆದು, ಬಿಗಿ ಭದ್ರತೆಯಲ್ಲಿ ಚಿಂಚನಸೂರ್ ಹಾಗೂ ಮಾಲಕರೆಡ್ಡಿ ಅವರನ್ನು ಕಾಂಗ್ರೆಸ್ ಕಚೇರಿಯಿಂದ ಕರೆದೊಯ್ದರು.
ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಬೆಂಬಲಿತ ಅಭ್ಯರ್ಥಿಗಳನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ್ದನ್ನು ವಿರೋಧಿಸಿ ಯಾದಗಿರಿ ಕಾಂಗ್ರೆಸ್ ಕಚೇರಿ ಬಳಿ ಇಂದು ಕಾರ್ಯಕರ್ತರು ಪ್ರತಿಭಟಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


