ತೆರಿಗೆ ಅಧಿಕಾರಿಗಳಿಂದ ಸಿಎಂ ಆಪ್ತ ಕೆಂಪಯ್ಯ ವಿಚಾರಣೆ
ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಅವರನ್ನು ಬುಧವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ...

ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಅವರನ್ನು ಬುಧವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.
ಈ ಹಿಂದೆ ಮೂವರು ವಿಧಾನಪರಿಷತ್ ಸದಸ್ಯರ ನಿವಾಸಗಳ ಮೇಲೆ ನಡೆದಿದ್ದ ಆದಾಯ ತೆರಿಗೆ ಇಲಾಖೆ ದಾಳಿ ಸಂದರ್ಭದಲ್ಲಿ ದೊರೆತಿದ್ದ ಡೈರಿಯಲ್ಲಿನ ಮಾಹಿತಿ ಆಧಾರದಲ್ಲಿ ಈ ವಿಚಾರಣೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ವಿಧಾನಪರಿಷತ್ ಸದಸ್ಯರ ನಿವಾಸಗಳ ಮೇಲೆ ನಡೆದಿದ್ದ ದಾಳಿ ಸಂದರ್ಭದಲ್ಲಿ ದೊರೆತ ಡೈರಿಯಲ್ಲಿ ಕೆಂಪಯ್ಯ ಅವರ ಹೆಸರು ಉಲ್ಲೇಖವಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಏಪ್ರಿಲ್ 27ರಂದು ಕೆಂಪಯ್ಯ ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಅದರಂತೆ ಕೆಂಪಯ್ಯ ಅವರು ಬುಧವಾರ ಸಂಜೆ 5.10 ಕ್ಕೆ ನಗರದಲ್ಲಿರುವ ಆದಾಯ ತೆರಿಗೆ ಕಚೇರಿಗೆ ಆಗಮಿಸಿ ರಾತ್ರಿ 9 ಗಂಟೆವರೆಗೆ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದರು ಎಂದು ಹೇಳಲಾಗಿದೆ.
ವಿಧಾನಪರಿಷತ್ ಸದಸ್ಯರು ಕೆಂಪಯ್ಯ ಅವರೊಂದಿಗೆ ಸಂಭಾಷಣೆ ನಡೆಸಿರುವುದು ದೂರವಾಣಿ ಕರೆಗಳ ಲಿಸ್ಟ್‌ನಲ್ಲಿ ಪತ್ತೆಯಾಗಿದೆ. ಹೀಗಾಗಿ, ಅವರೊಂದಿಗಿನ ಸಂಪರ್ಕದ ಬಗ್ಗೆ ಅಧಿಕಾರಿಗಳು ಮಾಹಿತಿ ಪಡೆದರು ಎಂದು ಹೇಳಲಾಗಿದೆ.
ಇನ್ನು ಈ ಸಂಬಂಧ ಪ್ರತಿಕ್ರಿಯಿಸಿರುವ ಕೆಂಪಯ್ಯ, ನಾನು ಯಾವುದೇ ತಪ್ಪು ಮಾಡಿಲ್ಲ, ಕೆಲ ಮಾಧ್ಯಮಗಳು ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿವೆ ಎಂದು ಕಿಡಿ ಕಾರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


