ಬೆಂಗಳೂರಿನಲ್ಲಿ ಮತ್ತೋರ್ವ ಟೆಕ್ಕಿ ಆತ್ಮಹತ್ಯೆಗೆ ಶರಣು
ಬೆಂಗಳೂರಿನಲ್ಲಿ ಮತ್ತೋರ್ವ ಸಾಫ್ಟ್ ವೇರ್ ಇಂಜಿನಿಯರ್ ಆತ್ಮಹತ್ಯೆಗೆ ಶರಣಾಗಿದ್ದು, ಎಚ್ಎಸ್ಆರ್ ಲೇಔಟ್ 6ನೇ ಹಂತ ಕೆಪಿಸಿ ಲೇಔಟ್ನಲ್ಲಿ ನೇಣು ಹಾಕಿಕೊಂಡು ಸಾಫ್ಟ್‌ವೇರ್ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೋರ್ವ ಸಾಫ್ಟ್ ವೇರ್ ಇಂಜಿನಿಯರ್ ಆತ್ಮಹತ್ಯೆಗೆ ಶರಣಾಗಿದ್ದು, ಎಚ್ಎಸ್ಆರ್ ಲೇಔಟ್ 6ನೇ ಹಂತ ಕೆಪಿಸಿ ಲೇಔಟ್ನಲ್ಲಿ ನೇಣು ಹಾಕಿಕೊಂಡು ಸಾಫ್ಟ್‌ವೇರ್ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಾಲ್ಕು ವರ್ಷಗಳಿಂದ ಎಚ್ಎಸ್ಆರ್ ಲೇಔಟ್ ನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ತಮಿಳುನಾಡು ಮೂಲದ ವಂಶಿಕೃಷ್ಣ (29 ವರ್ಷ)ಎಂಬಾತನೇ ಆತ್ಮಹತ್ಯೆಗೆ ಶರಣಾದ ಟೆಕ್ಕಿ. ಜೀವನದಲ್ಲಿ ಜಿಗುಪ್ಸೆಯಾಗಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ವಂಶಿ ಕೃಷ್ಣ ಡೆತ್‌ನೋಟ್ ಬರೆದಿಟ್ಟಿದ್ದಾನೆ.
ಸಹೋದ್ಯೋಗಿಗಳು ನೀಡಿರುವ ಮಾಹಿತಿಯಂತೆ ಕಳೆದ 2 ದಿನಗಳಿಂದ ವಂಶಿಕೃಷ್ಣ ಕೆಲಸಕ್ಕೆ ಹೋಗಿರಲಿಲ್ಲವಂತೆ. ಮೊಬೈಲ್ ಗೆ ಕರೆ ಮಾಡಿದರೆ ಫೋನ್ ಸ್ವಿಚ್ ಆಫ್ ಆಗಿತ್ತು. ಹೀಗಾಗಿ ಅನುಮಾನಗೊಂಡ ಸಹೋದ್ಯೋಗಿಗಳು ಶುಕ್ರವಾರ ಬೆಳಗ್ಗೆ ವಂಶಿಕೃಷ್ಣ ಮನೆ ಬಳಿ ಬಂದಾಗ ಆತ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ವಂಶಿಕೃಷ್ಣ 2 ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ. ಗುರುವಾರ ರಾತ್ರಿಯಿಂದ ಮನೆ ಸುತ್ತಮುತ್ತ ದುರ್ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿಕೆ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಮಾರತ್ ಹಳ್ಳಿ ಸಮೀಪ 28 ವರ್ಷದ ಟೆಕ್ಕಿ ಅಂಕಿತಾ ಸೋನಿ ಎಂಬುವವರು ಆತ್ಮಹತ್ಯೆ ಶರಣಾಗಿದ್ದರು. ಇದಾದ 15 ದಿನಗಳ ಅಂತರದಲ್ಲಿ ಮತ್ತೋರ್ವ ಟೆಕ್ಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


