ಬೆಂಗಳೂರಿನಲ್ಲಿ ತಲೆ ಕತ್ತರಿಸಿ ಯುವಕನ ಭೀಕರ ಕೊಲೆ!
ಬೆಂಗಳೂರಿನಲ್ಲಿ ಮತ್ತೆ ರೌಡಿಗಳ ಅಟ್ಟಹಾಸ ಮುಂದುವರೆದಿದ್ದು, ಯುವಕನೊಬ್ಬನ ತಲೆ ಕತ್ತರಿಸಿ ಭೀಕರವಾಗಿ ಕೊಲೆಗೈದು ದೇಹನ್ನು ಬಿಟ್ಟು ತಲೆಯೊಂದಿಗೆ ದುಷ್ಕರ್ಮಿಗಳು ಪರಾರಿಯಾಗಿರುವ ದುರ್ಘಟನೆ ಎಲೆಕ್ಟ್ರಾನಿಕ್‌ಸಿಟಿಯಲ್ಲಿ ನಡೆದಿದೆ...

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ರೌಡಿಗಳ ಅಟ್ಟಹಾಸ ಮುಂದುವರೆದಿದ್ದು, ಯುವಕನೊಬ್ಬನ ತಲೆ ಕತ್ತರಿಸಿ ಭೀಕರವಾಗಿ ಕೊಲೆಗೈದು ದೇಹನ್ನು ಬಿಟ್ಟು ತಲೆಯೊಂದಿಗೆ ದುಷ್ಕರ್ಮಿಗಳು ಪರಾರಿಯಾಗಿರುವ ದುರ್ಘಟನೆ ಎಲೆಕ್ಟ್ರಾನಿಕ್‌ಸಿಟಿಯಲ್ಲಿ ನಡೆದಿದೆ.
ಎಲೆಕ್ಟ್ರಾನಿಕ್ ಸಿಟಿಯ ಸುಭಾಷ್‌ನಗರದ ನಿರ್ಜನ ಪ್ರದೇಶದಲ್ಲಿ ಈ ಭೀಕರ ಹತ್ಯೆ ನಡೆದಿದ್ದು, ನಿರ್ಜನ ಪ್ರದೇಶದಲ್ಲಿ ಇಂದು ಬೆಳಗ್ಗೆ 9ರ ಸುಮಾರಿನಲ್ಲಿ ತಲೆಯಿಲ್ಲದ ಸುಮಾರು 25 ವರ್ಷ ವಯಸ್ಸಿನ ಯುವಕನ ಪತ್ತೆಯಾಗಿದೆ. ದೇಹ ಪತ್ತೆಯಾದ ಕೂಡಲೇ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ರುಂಡವಿಲ್ಲದ ದೇಹದ ಮಹಜರು ಪಡೆದರು.
ಬೇರೆ ಯಾವುದೋ ಪ್ರದೇಶದಿಂದ ಯುವಕನನ್ನು ಕರೆತಂದು ಸುಭಾಷ್‌ನಗರದ ನಿರ್ಜನ ಪ್ರದೇಶದಲ್ಲಿ ತಲೆ ಕತ್ತರಿಸಿ ಕೊಲೆ ಮಾಡಲಾಗಿದ್ದು, ಆತನ ಗುರುತು ಪತ್ತೆಯಾಗದಿರಲಿ ಎನ್ನುವ ಕಾರಣಕ್ಕಾಗಿ ದುಷ್ಕರ್ಮಿಗಳು ಯುವಕನ ತಲೆಯನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಡಿಸಿಪಿ ಡಾ.ಬೋರಲಿಂಗಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಎಲೆಕ್ಟ್ರಾನಿಕ್‌ಸಿಟಿ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


