ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿ ಅರುಣ್ ಕುಮಾರ್ ನೇಮಕ
ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿ ಧಾರವಾಡ ವಿಭಾಗೀಯ ಪ್ರಚಾರಕ ಅರುಣ್ ಕುಮಾರ್ ನೇಮಕಗೊಂಡಿದ್ದಾರೆ.

ಬೆಂಗಳೂರು: ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿ ಧಾರವಾಡ ವಿಭಾಗೀಯ ಪ್ರಚಾರಕ ಅರುಣ್ ಕುಮಾರ್ ನೇಮಕಗೊಂಡಿದ್ದಾರೆ.
ಈ ಹಿಂದೆ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿದ್ದ ಸಂತೋಷ್ ಅವರನ್ನು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಹುದ್ದೆ ತೆರವುಗೊಂಡಿತ್ತು. ಈ ಹಿನ್ನೆಲೆಯಲ್ಲಿ ಈಗ ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಗೆ ಅರುಣ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಆರ್ ಎಸ್ಎಸ್ ಹಾಗೂ ಬಿಜೆಪಿ ಪಕ್ಷದ ನಡುವೆ ಸಮನ್ವಯ ಸೇತುವೆಯಾಗಿ ಕೆಲಸ ಮಾಡುವ ಸಂಘಟನಾ ಕಾರ್ಯದರ್ಶಿ ಹುದ್ದೆ ಮಹತ್ವದ್ದಾಗಿದೆ. 2014 ರಿಂದಲೂ ರಾಜ್ಯ ಸಂಘಟನಾ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಾತಿ ಕಸರತ್ತು ನಡೆಯುತ್ತಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


