ಡ್ರೈವರ್ ನ ಕಾರ್ ವೀಲಿಂಗ್ ಕ್ರೇಜ್ ಗೆ ಬಲಿಯಾದಳು ಯುವತಿ
ಡ್ರೈವರ್ ನ ವೀಲಿಂಗ್ ಕ್ರೇಜ್ನಿಂದಾಗಿ ಕಾರು ಹಾಗೂ ಬಸ್ಸು ಪರಸ್ಪರ ಡಿಕ್ಕಿಯಾಗಿ ಕಾರಿನಲ್ಲಿದ್ದ 25ರ ಹರೆಯದ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿರುವ ...

ಮಡಿಕೇರಿ: ಡ್ರೈವರ್ ನ ವೀಲಿಂಗ್ ಕ್ರೇಜ್ನಿಂದಾಗಿ ಕಾರು ಹಾಗೂ ಬಸ್ಸು ಪರಸ್ಪರ ಡಿಕ್ಕಿಯಾಗಿ ಕಾರಿನಲ್ಲಿದ್ದ 25ರ ಹರೆಯದ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ಮೈಸೂರು- ಮಡಿಕೇರಿ ರಾಜ್ಯ ಹೆದ್ದಾರಿಯ ಕೆದಕಲ್ ತಿರುವಿನಲ್ಲಿ ಸೋಮವಾರ ಕೆಎಸ್ಆರ್ಟಿಸಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೈಸೂರಿನ ರಾಜೇಂದ್ರನಗರದ ಕೇಸರಿ ನಿವಾಸಿ ಚೈತ್ರಾ (25) ಸಾವನ್ನಪ್ಪಿದ್ದಾಳೆ.
ಗಂಭೀರವಾಗಿ ಗಾಯ ಗೊಂಡ ಮೈಸೂರಿನ ಸದನ್ ಎಂಬಾತನನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಒಯ್ಯಲಾಯಿತು. ಮೈಸೂರಿನ ನಂದಿನಿ, ರೇಣುಕಾ, ವಿನಯ್ ಹಾಗೂ ಮಿಥುನ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಗೆ ಕಾರು ಚಾಲಕನ ಬೇಜವಾಬ್ದಾರಿಯೇ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


