ಬೆಂಗಳೂರಿನಲ್ಲಿ ಭೀಕರ ಅಪಘಾತ: ಆಟೋದಲ್ಲಿ ಪ್ರಯಾಣಿಸುತ್ತಿದ್ದ 3 ಸ್ಥಳದಲ್ಲೇ ಸಾವು
ಬೆಂಗಳೂರಿನ ಕುರುಬರಹಳ್ಳಿಯಲ್ಲಿ ಗುರುವಾರ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಓರ್ವ...

Published On :
ಬೆಂಗಳೂರು: ಬೆಂಗಳೂರಿನ ಕುರುಬರಹಳ್ಳಿಯಲ್ಲಿ ಗುರುವಾರ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ನಿಂತಿದ್ದ ಸ್ಟೇಷನರಿ ಲಾರಿಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತರು ಕಲಬುರ್ಗಿ ಮೂಲದ ಕುಲಿ ಕಾರ್ಮಿಕರು ಎನ್ನಲಾಗಿದೆ.
ಈ ಸಂಬಂಧ ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


