ಎಂಆರ್ ಪಿಎಲ್ ಗೆ ಕೃಷಿ ಭೂಮಿ ಮಂಜೂರು: ಪೇಜಾವರ ಶ್ರೀಗಳಿಂದ ತೀವ್ರ ವಿರೋಧ
ಎಂ ಆರ್ ಪಿಎಲ್ ನ ನಾಲ್ಕನೇ ಹಂತದ ವಿಸ್ತರಣೆಗಾಗಿ ರಾಜ್ಯ ಸರ್ಕಾರ 3 ,000 ಎಕರೆಯಷ್ಟು ಭೂಮಿ ನೀಡುವುದಲು ಮುಂದಾಗಿರುವುದನ್ನು ವಿಶ್ವೇಶ ತೀರ್ಥ ಸ್ವಾಮಿಗಳು ವಿರೋಧಿಸಿದ್ದಾರೆ.

ಉಡುಪಿ: ಮಂಗಳೂರಿನಲ್ಲಿ ಎಂ ಆರ್ ಪಿಎಲ್ ನ ನಾಲ್ಕನೇ ಹಂತದ ವಿಸ್ತರಣೆಗಾಗಿ ರಾಜ್ಯ ಸರ್ಕಾರ 3 ,000 ಎಕರೆಯಷ್ಟು ಭೂಮಿ ನೀಡುವುದಲು ಮುಂದಾಗಿರುವುದನ್ನು ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮಿಗಳು ವಿರೋಧಿಸಿದ್ದಾರೆ.
ಪೇಜಾವರದ ಶ್ರೀ ಕೃಷ್ಣಾ ಮಠದ ಆವರಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಪೇಜಾವರ ಸ್ವಾಮೀಜಿ, " ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ್ದ ಕೈಗಾರಿಕಾ ಸಚಿವ ಆರ್ ವಿ ದೇಶಪಾಂಡೆ ಎಂಆರ್ ಪಿಎಲ್ ( ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್) ನ ವಿಸ್ತರಣೆಗಾಗಿ 3 ಸಾವಿರ ಎಕರೆಯಷ್ಟು ಕೃಷಿ ಭೂಮಿಯನ್ನು ಮಂಜೂರು ಮಾಡುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಇದಕ್ಕೆ ತಮ್ಮ ವಿರೋಧವಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ತಕ್ಷಣವೇ ತನ್ನ ನಿರ್ಧಾರವನ್ನು ವಾಪಸ್ ಪಡೆಯಬೇಕು. ಕಳೆದ ಎರಡು ವರ್ಷಗಳ ಹಿಂದೆಯೂ ಎಂಆರ್ ಪಿಎಲ್ ನ ವಿಸ್ತರಣೆಗಾಗಿ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಆಗಲೂ ವಿರೋಧ ವ್ಯಕ್ತಪಡಿಸಿದ್ದಾಗಿ ಪೇಜಾವರ ಶ್ರೀಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


