ಕಳೆದುಹೋದ ಮಕ್ಕಳನ್ನು ರಕ್ಷಿಸುವಲ್ಲಿ ನೆರವಾಗುವ ಲೈಂಗಿಕ ಕಾರ್ಯಕರ್ತರು
ರಾಷ್ಟ್ರೀಯ ಪುರಸ್ಕಾರ ಗಳಿಸಿದ ಸರ್ಕಾರೇತರ ಸಂಘಟನೆಯೊಂದು ಪ್ರತಿನಿತ್ಯ 15ರಿಂದ 20 ಕಣ್ಮರೆಯಾದ ...

ಬೆಂಗಳೂರು: ರಾಷ್ಟ್ರೀಯ ಪುರಸ್ಕಾರ ಗಳಿಸಿದ ಸರ್ಕಾರೇತರ ಸಂಘಟನೆಯೊಂದು ಪ್ರತಿನಿತ್ಯ 15ರಿಂದ 20 ಕಣ್ಮರೆಯಾದ ಮಕ್ಕಳನ್ನು ರಕ್ಷಣೆ ಮಾಡುತ್ತದೆ. ಇದಕ್ಕೆ ಲೈಂಗಿಕ ಕಾರ್ಯಕರ್ತೆಯರು ಮತ್ತು ರೈಲ್ವೆ ಪ್ಲಾಟ್ ಫಾರ್ಮ್ ಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಸಹಾಯ ಮಾಡುತ್ತಾರೆ.
ಬೋಸ್ಕೋ ಸಂಸ್ಥೆಯ ಕಾರ್ಯಕಾರಿ ನಿರ್ದೇಶಕ ಮ್ಯಾಥ್ಯೂ ಥಾಮಸ್, ಇದು ಲೈಂಗಿಕ ಕಾರ್ಯಕರ್ತರ ಮೇಲೆ ಜನರಿಗಿರುವ ಅಭಿಪ್ರಾಯವನ್ನು ಬದಲಾಯಿಸುತ್ತದೆ. ಲೈಂಗಿಕ ಕಾರ್ಯಕರ್ತರು ಜನರಿಗೆ, ಸಮಾಜಕ್ಕೆ ಕೊಡುಗೆ ನೀಡಲು ಬಯಸುತ್ತಾರೆ ಎನ್ನುತ್ತಾರೆ.
ನಗರಗಳಲ್ಲಿ ಇರುವ ಅನಾಥ ಮಕ್ಕಳ ಅದರಲ್ಲೂ ಹೆಣ್ಣು ಮಕ್ಕಳ ಜೀವನ ನರಕದ ಕೂಪಕ್ಕೆ ಸಾಗುತ್ತದೆ. ಅವರನ್ನು ಪತ್ತೆ ಹಚ್ಚಿ ಅವರಿಗೆ ಉತ್ತಮ ಶಿಕ್ಷಣ ಮತ್ತು ವಸತಿ ವ್ಯವಸ್ಥೆಯನ್ನು ಸರ್ಕಾರ ಮತ್ತು ಸರ್ಕಾರೇತರ ಸಂಘಟನೆಗಳು ನೀಡಬೇಕು ಎನ್ನುತ್ತಾರೆ ಹೆಸರು ಹೇಳಲಿಚ್ಛಿಸದ ಲೈಂಗಿಕ ಕಾರ್ಯಕರ್ತರೊಬ್ಬರು.
ಬೆಂಗಳೂರು ನಗರದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಸಿಕ್ಕಿರುವ ಅನೇಕ ಮಕ್ಕಳನ್ನು ಲೈಂಗಿಕ ಕಾರ್ಯಕರ್ತೆಯರು ಮತ್ತು ಲೈಂಗಿಕ ಅಲ್ಪಸಂಖ್ಯಾತರು ಕಾಪಾಡಿ ಬೋಸ್ಕೋ ಸಂಸ್ಥೆಗೆ ಒಪ್ಪಿಸಿದ್ದಾರೆ. ತೃತೀಯ ಲಿಂಗಿಗಳ ಗುಂಪೊಂದು ಕೆಎಸ್ ಎರ್ ಅಥವಾ ನಗರ ರೈಲ್ವೆ ನಿಲ್ದಾಣದಲ್ಲಿರುವ ಅನಾಥ ಮಕ್ಕಳನ್ನು ರಕ್ಷಿಸಿ ರೆಸ್ಕ್ಯೂ ಬೂತ್ ಗೆ ಒಪ್ಪಿಸುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


