ರಾಜ್ಯ

ಬೆಂಗಳೂರಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಓಲಾ ಕ್ಯಾಬ್ ಡ್ರೈವರ್

ಬೆಂಗಳೂರಿನ ಇಂದಿರಾನಗರದಲ್ಲಿ ಓಲಾ ಕ್ಯಾಬ್‌ನ ಚಾಲಕನೊಬ್ಬ 31ರ ಹರೆಯದ ಮಹಿಳೆಯೊಂದಿಗೆ ಅನುಚಿತ ವರ್ತನೆ ಮಾಡಿರುವ ಬಗ್ಗೆ ಶನಿವಾರ...

ಬೆಂಗಳೂರಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಓಲಾ ಕ್ಯಾಬ್ ಡ್ರೈವರ್
ಓಲಾ ಕ್ಯಾಬ್‌
Published On :
ಬೆಂಗಳೂರು:  ಬೆಂಗಳೂರಿನ ಇಂದಿರಾನಗರದಲ್ಲಿ ಓಲಾ ಕ್ಯಾಬ್‌ನ ಚಾಲಕನೊಬ್ಬ 31ರ ಹರೆಯದ ಮಹಿಳೆಯೊಂದಿಗೆ ಅನುಚಿತ ವರ್ತನೆ ಮಾಡಿರುವ ಬಗ್ಗೆ ಶನಿವಾರ ವರದಿಯಾಗಿದೆ.
ಮಹಿಳೆ ಇಂದಿರಾ ನಗರದಿಂದ ಬಿಟಿಎಂ ಫಸ್ಟ್ ಸ್ಟೇಜ್‌ಗೆ ಹೋಗಲು ಕ್ಯಾಬ್ ಬುಕ್ ಮಾಡಿದ್ದರು. ಸಿಎಂಹೆಚ್ ರಸ್ತೆಗೆ ತಲುಪುವ ವೇಳೆ ಚಾಲಕ ಆಕೆಯೊಂದಿಗೆ ಅನುಚಿತವಾಗಿ ವರ್ತಿಸಲು ಶುರು ಮಾಡಿದ್ದಾನೆ. ಮಹಿಳೆ ಬೊಬ್ಬೆ ಹಾಕುತ್ತಿದ್ದಂತೆ ಆತ ಕಾರು ಮತ್ತು ಕಾರಿನ ಡ್ರೈವಿಂಗ್ ಲೈಸನ್ಸ್ ನ್ನು ಬಿಟ್ಟು ಪರಾರಿಯಾಗಿದ್ದಾನೆ.
ಈ ಬಗ್ಗೆ ಮಹಿಳೆ ತಕ್ಷಣವೇ ಪೊಲೀಸರಿಗೆ ದೂರಕು ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಕಾರನ್ನು ವಶ ಪಡಿಸಿಕೊಂಡಿದ್ದಾರೆ. 
ಡ್ರೈವಿಂಗ್ ಲೈಸನ್ಸ್‌ನಿಂದ ಚಾಲಕನ ಹೆಸರು ಬಿಪಿ ಬಸವರಾಜು ಎಂದು ತಿಳಿದು ಬಂದಿದ್ದು, ಪರಾರಿಯಾಗಿರುವ ಆತನಿಗಾಗಿ ಶೋಧ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.