ಬಿಬಿಎಂಪಿ ಅಧಿಕಾರಿಗಳಿಂದ ಯುಬಿ ಸಿಟಿ ಮೇಲೆ ದಾಳಿ, 5 ಲಕ್ಷ ರು. ದಂಡ
ನಿಷೇಧಿತ ಪ್ಲಾಸ್ಟಿಕ್ ಚೀಲಗಳನ್ನು ಬಳಸುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)...

Published On :
ಬೆಂಗಳೂರು: ನಿಷೇಧಿತ ಪ್ಲಾಸ್ಟಿಕ್ ಚೀಲಗಳನ್ನು ಬಳಸುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಅಧಿಕಾರಿಗಳು ಬುಧವಾರ ನಗರದ ಪ್ರತಿಷ್ಠಿತ ಯುಬಿ ಸಿಟಿ ಮೇಲೆ ದಾಳಿ ನಡೆಸಿದ್ದಾರೆ.
ಬಿಬಿಎಂಪಿ ಪೂರ್ವ ವಲಯ ಜಂಟಿ ಆಯುಕ್ತ ಡಾ. ಯತೀಶ್ ಕುಮಾರ್ ನೇತೃತ್ವದ ತಂಡ ಇಂದು ಯುಬಿ ಸಿಟಿ ಮೇಲೆ ದಾಳಿ ನಡೆಸಿದೆ. ಈ ವೇಳೆ ನಿಷೇಧಿತ ಪ್ಲಾಸ್ಟಿಕ್ ಚೀಲಗಳು ಪತ್ತೆಯಾಗಿದ್ದು, ಈ ಸಂಬಂಧ ಯುಬಿ ಸಿಟಿಗೆ 5 ಲಕ್ಷ ರುಪಾಯಿ ದಂಡ ವಿಧಿಸಲಾಗಿದೆ.
ಸಾಲಬಾಧೆಯಿಂದ ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ ಒಡೆತನದ ಯುಬಿ ಸಿಟಿ ಬೆಂಗಳೂರಿನಲ್ಲಿರುವ ಒಂದು ಬೃಹತ್ ವಾಣಿಜ್ಯ ಸಂಕೀರ್ಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


