ರಾಜ್ಯ

ಫಾಸ್ಟ್ ಫುಡ್ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ: ಇಬ್ಬರಿಗೆ ಗಾಯ

ಬೆಂಗಳೂರಿನ ಫ್ರೇಜರ್ ಟೌನ್ ನ ಪ್ರಸಿದ್ಧ ಫಾಸ್ಟ್ ಪುಡ್ ವೊಂದರಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಿಂದ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ....

ಫಾಸ್ಟ್ ಫುಡ್ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ: ಇಬ್ಬರಿಗೆ ಗಾಯ
ಫ್ರೇಜರ್ ಟೌನ್ ನಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟ
Published On :

ಬೆಂಗಳೂರು:  ಬೆಂಗಳೂರಿನ ಫ್ರೇಜರ್ ಟೌನ್ ನ ಪ್ರಸಿದ್ಧ ಫಾಸ್ಟ್ ಪುಡ್ ವೊಂದರಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಿಂದ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.

ಅನಿಲ ಸೋರಿಕೆಯಿಂದಾಗಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು. ಅಂಗಡಿ ಮುಂದೆ ನಡೆದುಕೊಂಡು ಹೋಗುತ್ತಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಕೋಲ್ಸ್ ರೋಡ್ ಜಂಕ್ಷನ್ ನಲ್ಲಿರು 3 ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿರುವ ಖಾನ್ ಸಾಹೇಬ್ ರೋಲ್ಸ್ ಫುಡ್ ಜಾಯಿಂಟ್ ನಲ್ಲಿ ಮಂಗಳವಾರ ಬೆಳಗ್ಗೆ 7.45 ರ ವೇಳೆಗೆ ಸ್ಪೋಟ ಸಂಭವಿಸಿದೆ. ಅಂಗಡಿ ಒಳಗಿದ್ದ ಎಲ್ಲಾ ಸಾಮಾನು ಸರಂಜಾಮು ಭಸ್ಮವಾಗಿವೆ.

ತಕ್ಷಣವೇ ಘಟನಾ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಫಾಸ್ಟ್ ಫುಡ್ ಅಂಗಡಿಯಲ್ಲಿ ನಾಲ್ಕು ಸಿಲಿಂಡರ್ ಗಳಿದ್ದವು. ರಾತ್ರಿ ಅಂಗಡಿ ಮುಚ್ಚಿದ ನಂತರ ಒಂದು ಸಿಲಿಂಡರ್ ನಲ್ಲಿ ಅನಿಲ ಸೋರಿಕೆಯಾಗಿದೆ. ಬೆಳಗ್ಗೆ ಬಂದು ಅಂಗಡಿ ತೆರೆದಾಗ ಸ್ಫೋಟ ಸಂಭವಿಸಿದೆ. ಕಟ್ಟಡದ ಮಾಲೀಕರ ಮಗಳು ನಾಯಿಯೊಂದಿಗೆ ವಾಯು ವಿಹಾರಕ್ಕೆ ತೆರಳುತ್ತಿದ್ದಳು. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಆಕೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಮತ್ತೊಬ್ಬ ಆಟೋ ರಿಕ್ಷಾ ಚಾಲಕನೂ ಕೂಡ  ಗಾಯಗೊಂಡಿದ್ದಾನೆ. ಪುಲಕೇಶಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.