ಬೆಂಗಳೂರಿನಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಉದ್ಯಮಿ, ಬಂಧನ
ಉದ್ಯಮಿಯೊಬ್ಬರು ತಮ್ಮ ಸಂಬಂಧಿಯನ್ನು ಹೆದರಿಸಲು ಗಾಳಿಯಲ್ಲಿ ಗುಂಡು ಹಾರಿಸಿ ಪೊಲೀಸರ ಅತಿಥಿಯಾಗಿರುವ ಘಟನೆ ನಗರದ...

Published On :
ಬೆಂಗಳೂರು: ಉದ್ಯಮಿಯೊಬ್ಬರು ತಮ್ಮ ಸಂಬಂಧಿಯನ್ನು ಹೆದರಿಸಲು ಗಾಳಿಯಲ್ಲಿ ಗುಂಡು ಹಾರಿಸಿ ಪೊಲೀಸರ ಅತಿಥಿಯಾಗಿರುವ ಘಟನೆ ನಗರದ ದೇವಸಂದ್ರದಲ್ಲಿ ಶನಿವಾರ ನಡೆದಿದೆ.
ಪೊಲೀಸರ ಪ್ರಕಾರ, ಪರವಾನಗಿ ಪಡೆದ ಗನ್ ಹೊಂದಿದ್ದ ಉದ್ಯಮಿ ರವಿ ಎಂಬುವವರು ಕೆ.ಆರ್.ಪುರಂನ ದೇವಸಂದ್ರದಲ್ಲಿರುವ ತಮ್ಮ ಕಚೇರಿಯ ಬಳಿ ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಸಂಬಂಧಿಯೊಂದಿಗೆ ಜಗಳ ಮಾಡುತ್ತಿದ್ದರು. ಈ ವೇಳೆ ಜಗಳ ತಾರಕಕ್ಕೆಹೋಗಿ ಸಂಬಂಧಿಯನ್ನು ಹೆದರಿಸಲು ರವಿ ಅವರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದರಿಂದ ಕೆಲ ಕಾಲ ಈ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.
ಗುಂಡಿನ ಶಬ್ದದಿಂದ ಬೆಚ್ಚಿಬಿದ್ದ ಜನ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಳ್ಥಕ್ಕೆ ಆಗಮಿಸಿದ ಪೊಲೀಸರು ಉದ್ಯಮಿ ರವಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


