ರಾಜ್ಯ

ಲೋಕಾಯುಕ್ತ ಪೊಲೀಸರಿಂದ ಸಿಎಂ ಹ್ಯೂಬ್ಲಾಟ್ ವಾಚ್ ಪ್ರಕರಣದ ತನಿಖೆ

ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ ಅವರ ದುಬಾರಿ ವಾಚ್ ಪ್ರಕರಣದ ಪ್ರಾಥಮಿಕ ತನಿಖೆಯನ್ನು ಅಂತಿಮಗೊಳಿಸಿದ್ದಾರೆ. ...

ಲೋಕಾಯುಕ್ತ ಪೊಲೀಸರಿಂದ ಸಿಎಂ ಹ್ಯೂಬ್ಲಾಟ್ ವಾಚ್ ಪ್ರಕರಣದ ತನಿಖೆ
ಸಿದ್ದರಾಮಯ್ಯ
Published On :

ಬೆಂಗಳೂರು: ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ ಅವರ ದುಬಾರಿ ವಾಚ್ ಪ್ರಕರಣದ ಪ್ರಾಥಮಿಕ ತನಿಖೆಯನ್ನು ಅಂತಿಮಗೊಳಿಸಿದ್ದಾರೆ.

ಲೋಕಾಯುಕ್ತ ಪೊಲೀಸರು ತನಿಖೆ ಮುಗಿಸಿದ್ದರೂ ಪೊಲೀಸರ ಅನುಮತಿಯಿಲ್ಲದೇ ಅವರಿಗೆ ಯಾವುದೇ ರೀತಿಯ ಕ್ರಮ ಕೈಗೊಳ್ಳುವ ಅಧಿಕಾರವಿಲ್ಲ.

ಮಾರ್ಚ್ 19 ರಂದು ಎಸಿಬಿ ರಚನೆ ಮಾಡಿದ ರಾಜ್ಯ ಸರ್ಕಾರ ಲೋಕಾಯುಕ್ತ ಪೊಲೀಸರ ಪೂರ್ಣ ಅಧಿಕಾರವನ್ನು ಕಸಿದುಕೊಂಡಿತು.

ಈ ವರೆಗೆ ಎಸಿಬಿಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹಲವು ದೂರುಗಲು ಬಂದಿವೆ.ಆದರೆ ಇದುವರೆಗೂ ಒಂದು ಪ್ರಕರಣವನ್ನು ದಾಖಲಿಸಿಕೊಂಡಿಲ್ಲ. ಆರ್ ಟಿ ಐ ಕಾರ್ಯಕರ್ತ ರಾಮಮೂರ್ತಿ ಗೌಡ ಸಿಎಂ ಸಿದ್ದರಾಮಯ್ಯ ಅವರ ಹ್ಯಬ್ಲೋಟ್ ವಾಚ್ ಪ್ರಕರಣ ಸಂಬಂಧ ದೂರು ನೀಡಿದ್ದಾರೆ. ಆದರೆ ಭ್ರಷ್ಟಾಚಾರ ನಿಯಂತ್ರಮ ಕಾಯ್ದೆ ಅನ್ವಯ ನಮಗೆ ದೂರು ದಾಖಲಿಸಿಕೊಳ್ಳುವ ಅಧಿಕಾರವಿಲ್ಲ ಎಂದು ಎಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಬಾಬು ರಾವ್ ಚಿಂಚನಸೂರ್ ಅವರು ಸೇರಿದಂತೆ ಅಧಿಕಾರವಿರುವ ರಾಜಕಾರಣಿಗಳಿಗೆ ಅಧಿಕಾರಿಗಳು ಸಹಾಯ ಮಾಡುತ್ತಾರೆ. ಅಧಿಕಾರಿಗಳು ಬೇಕು ಎಂತಲೇ ತನಿಖೆಯನ್ನು ವಿಳಂಬ ಮಾಡುತ್ತಾರೆ ಎಂದು ಲೋಕಾಯುಕ್ತ ತಿಳಿಸಿದೆ.

ಇದುವರೆಗೂ ಲೋಕಾಯಿಕ್ತ ಪೊಲೀಸರು 747 ಕೇಸುಗಳ ತನಿಖೆ ನಡೆಸಿದ್ದಾರೆ. ಮೊಟಕಕುಗೊಳಿಸಿರುವ ಅಧಿಕಾರವನ್ನು ಪುನರ್ ಸ್ಥಾಪಿಸುವವರೆಗೂ ಯಾವುದೇ ಚಾರ್ಜ್ ಶೀಟ್ ಸಲ್ಲಿಸದಿರಲು ಲೋಕಾಯುಕ್ತ ಕೋರ್ಟ್ ನಿರ್ಧರಿಸಿದೆ.

ಇನ್ನೂ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳ ತನಿಖೆಯನ್ನು ಕೈಗೊಳ್ಳುವಂತೆ ಮುಖ್ಯ ನ್ಯಾಯಮೂರ್ತಿ ಸುಬ್ರೋ ಕಮಲ್ ಮುಖರ್ಜಿ ಅವರನ್ನೊಳಗೊಂಡ ಏಕ ಸದಸ್ಯ ಪೀಠ ಆದೇಶಿಸಿದೆ.

ಒಂದು ವೇಳೆ ನಾವು ಪ್ರಕರಣದ ವಿಚಾರಣೆ ನಡೆಸಿ ದೂರು ಅಥವಾ ಚಾರ್ಜ್ ಶೀಟ್ ದಾಖಲಿಸಿದರೇ ನಮಗೆ ಅಧಿಕಾರ ನೀಡಿಲ್ಲ, ಹೇಗೆ ಚಾರ್ಜ್ ಶೀಟ್ ಸಲ್ಲಿಸಿದಿರಿ ಎಂದು ನ್ಯಾಯಾಲಯ ಕೇಳುತ್ತದೆ. ಬಾಕಿ ಉಳಿದಿರುವ ಪ್ರಕರಣಗಳ ತನಿಖೆ ನಡೆಸದಿದ್ದರೇ ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಲೋಕಾಯುಕ್ತ ಸಂಸ್ಥೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.