ಆ್ಯಂಬುಲೆನ್ಸ್ ಬಾರದೆ ಗಾಯಾಳು ಸಾವು
ಬೈಕ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಯೊಬ್ಬರನ್ನು ಆಸ್ಪತ್ರೆಗೆ ಕೊಂಡೊಯ್ಯಲು ಸೂಕ್ತ ಸಮಯಕ್ಕೆ...

Published On :
ಬೆಂಗಳೂರು: ಬೈಕ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಯೊಬ್ಬರನ್ನು ಆಸ್ಪತ್ರೆಗೆ ಕೊಂಡೊಯ್ಯಲು ಸೂಕ್ತ ಸಮಯಕ್ಕೆ ಆ್ಯಂಬುಲೆನ್ಸ್ ಬಾರದ ಕಾರಣ ಗಾಯಾಳು ಮೃತಪಟ್ಟಿರುವ ಘಟನೆ ಬೆಂಗಳೂರಿನ ಸಿಂಗ್ರ ಸಂದ್ರದ ಬಳಿ ನಡೆದಿದೆ.
ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ಸಿಂಗಸಂದ್ರದ ಬಳಿ ಈ ಘಟನೆ ನಡೆದಿದೆ. ಎಇಸಿಎಚ್ ನಿವಾಸಿ ನಾಗರಾಜು(62) ಮೃತಪಟ್ಟವರು. ಬೈಕ್ ಸವಾರರಾದ ಕೇಶವ್ ಹಾಗೂ ನವೀನ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಎನ್ ಜಿಎಫ್ ನ ಉದ್ಯೋಗಿಯಾಗಿದ್ದ ನಾಗರಾಜು ಸ್ವಯಂ ನಿವೃತ್ತಿ ಪಡೆದುಕೊಂಡಿದ್ದರು. ಶುಕ್ರವಾರ ಸಂಜೆ ಮನೆ ಸಮೀಪ ಅಂಗಡಿಗೆ ಹೋಗಿ ರಸ್ತೆ ದಾಟುತ್ತಿರಬೇಕಾದರೆ ವೇಗವಾಗಿ ಬಂದ ಬೈಕ್ ನಾಗರಾಜು ಅವರಿಗೆ ಡಿಕ್ಕಿ ಹೊಡೆದಿದೆ. ತಲೆ ಮತ್ತು ಹೊಟ್ಟೆಗೆ ಬಲವಾದ ಪೆಟ್ಟು ಬಿದ್ದಿದೆ. ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಚಾಲಕ 5ರಿಂದ 10 ನಿಮಿಷದಲ್ಲಿ ಬರುತ್ತೇನೆಂದು ಹೇಳಿ 2 ಗಂಟೆಗಳಾದರೂ ಬರಲಿಲ್ಲ. ಕೊನೆಗೆ ಸಾರ್ವಜನಿಕರ ಸಹಾಯದಿಂದ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ, ಅಷ್ಟರೊಳಗೆ ನಾಗರಾಜು ಅವರು ಮೃತಪಟ್ಟಿದ್ದಾರೆ.
ಗಾಯಗೊಂಡ ಬೈಕ್ ಸವಾರರನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


