ರಾಜ್ಯ

ಮೇ 29 ರಂದು ದಾವಣಗೆರೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕೇಂದ್ರ ಎನ್ ಡಿಎ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 29ರಂದು ಪ್ರಧಾನಿ ನರೇಂದ್ರ ಮೋದಿ ಅವರು ದಾವಣಗೆರೆಗೆ ಆಗಮಿಸಲಿದ್ದಾರೆ...

ಮೇ 29 ರಂದು ದಾವಣಗೆರೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ನರೇಂದ್ರ ಮೋದಿ
Published On :

ದಾವಣಗೆರೆ: ಕೇಂದ್ರ ಎನ್ ಡಿಎ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ  ಮೇ 29ರಂದು ಪ್ರಧಾನಿ ನರೇಂದ್ರ ಮೋದಿ ಅವರು ದಾವಣಗೆರೆಗೆ ಆಗಮಿಸಲಿದ್ದಾರೆ ಎಂದು ಸಚಿವ ಜಿ.ಎಂ.ಸಿದ್ದೇಶ್ವರ್‌ ಹೇಳಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಖಾತೆ ರಾಜ್ಯ ಸಚಿವ ಜಿ.ಎಂ.ಸಿದ್ದೇಶ್ವರ್‌, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ (ಎಲ್‌ಪಿಜಿ) ಸಂಪರ್ಕ ನೀಡುವ ಪ್ರಧಾನಮಂತ್ರಿ ಉಜ್ವಲ ಯೋಜನೆ'ಗೆ  ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಎರಡು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಜನ ಪರ್ವ ಕಲ್ಯಾಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದೇಶದ ವಿವಿಧ ರಾಜ್ಯಗಳಿಗೆ 63 ಸಚಿವರು ಭೇಟಿ ನೀಡಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲಿದ್ದಾರೆ.

ಜನ ಪರ್ವ ಕಲ್ಯಾಣ ಕಾರ್ಯಕ್ರಮದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮೇ 29ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.