ರಾಜ್ಯ

ಬೆಂಗಳೂರು ಮೇಯರ್ ವಿರುದ್ಧ ಜಾತಿನಿಂದನೆ, ಕೊಲೆ ಬೆದರಿಕೆ ಪ್ರಕರಣ ದಾಖಲು

ಚುನಾವಣೆ ವೇಳೆ ಸೀರೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳಕ್ಕೆ ಸಂಬಂಧ ಪಟ್ಟಂತೆ 10 ತಿಂಗಳ ಬಳಿಕ ಮೇಯರ್ ಬಿ.ಎನ್. ಮಂಜುನಾಥ್ ರೆಡ್ಡಿ ವಿರುದ್ಧ ಜಾತಿ ನಿಂದನೆ ಮತ್ತು ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ.

ಬೆಂಗಳೂರು ಮೇಯರ್ ವಿರುದ್ಧ ಜಾತಿನಿಂದನೆ, ಕೊಲೆ ಬೆದರಿಕೆ ಪ್ರಕರಣ ದಾಖಲು
ಮೇಯರ್ ಮಂಜುನಾಥ್ ರೆಡ್ಡಿ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಚುನಾವಣೆ ವೇಳೆ ಸೀರೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳಕ್ಕೆ ಸಂಬಂಧ ಪಟ್ಟಂತೆ 10 ತಿಂಗಳ ಬಳಿಕ ಮೇಯರ್ ಬಿ.ಎನ್. ಮಂಜುನಾಥ್ ರೆಡ್ಡಿ ವಿರುದ್ಧ ಜಾತಿ  ನಿಂದನೆ ಮತ್ತು ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ.

ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್ ನಿರ್ದೇಶನದ ಮೇರೆಗೆ ಮೈಕೊ ಲೇಔಟ್ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿದ್ದು, ಸೀರೆ ವ್ಯಾಪಾರಿ  ಪಾಪಣ್ಣ ಎಂಬುವವರು ದೂರು ದಾಖಲಿಸಿದ್ದಾರೆ. 2015ರ ಆಗಸ್ಟ್ 17ರಂದು ಚುನಾವಣೆ ಸಂದರ್ಭದಲ್ಲಿ ಮೇಯರ್ ಮಂಜುನಾಥರೆಡ್ಡಿ ಹಾಗೂ ಅವರ ಬೆಂಬಲಿಗರು ತಮ್ಮ ಮೇಲೆ ಹಲ್ಲೆ  ನಡೆಸಿದ್ದರು. ಈ ವೇಳೆ ನನ್ನ ಸಹಾಯಕ್ಕೆ ಬಂದ ಸ್ನೇಹಿತ ಮುರುಗನ್ ಮೇಲೂ ಅವರ ಮಂಜುನಾಥ್ ರೆಡ್ಡಿ ಬೆಂಬಲಿಗರು ಹಲ್ಲೆ ಮಾಡಿದ್ದರು. ಅದೇ ದಿನ ಮೈಕೋ ಲೇಔಟ್ ಠಾಣೆಗೆ ಹೋಗಿ ದೂರು  ಕೊಟ್ಟಿದ್ದೆವು. ಆದರೆ, ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದರು ಎಂದು ಸೀರೆ ವ್ಯಾಪಾರಿ ಪಾಪಣ್ಣ ದೂರಿನಲ್ಲಿ ಆರೋಪಿಸಿದ್ದಾರೆ.

ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದ ಹಿನ್ನಲೆಯಲ್ಲಿ ಅನಿವಾರ್ಯವಾಗಿ ನ್ಯಾಯಾಲಯದ ಮೊರೆ ಹೋದೆವು ಎಂದು ಪಾಪಣ್ಣ ಹೇಳಿದ್ದಾರೆ. ಪಾಪಣ್ಣ ಸಲ್ಲಿಸಿದ ಪ್ರಕರಣದ ವಿಚಾರಣೆ  ನಡೆಸಿದ 2ನೇ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧಿಶರು, ದೂರು ದಾಖಲಿಸಿಕೊಂಡು ತನಿಖೆ ನಡೆಸಿ ವರದಿ ನೀಡುವಂತೆ ಮೈಕೋಲೇಔಟ್ ಠಾಣೆ ಪೊಲೀಸರಿಗೆ ನಿರ್ದೇಶಿಸಿದ ಹಿನ್ನೆಲೆಯಲ್ಲಿ  ಸೋಮವಾರ ಕೇಸ್ ದಾಖಲಾಗಿದೆ. ಕೋರ್ಟ್ ಆದೇಶದ ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಘಟನೆಯ ಸತ್ಯಾಸತ್ಯತೆ ಪರಿಶೀಲಿಸಿದ ನಂತರ ವರದಿ ತಯಾರಿಸಿ  ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಏನಿದು ಪ್ರಕರಣ?
ಬಿಬಿಎಂಪಿ ಚುನಾವಣೆ ಸಂದರ್ಭದಲ್ಲಿ ಸೀರೆ ಹಂಚಿಕೆ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ 2015ರ ಆಗಸ್ಟ್ 17ರಂದು ಬಿಟಿಎಂ ಲೇಔಟ್‌ನಲ್ಲಿ ಕಾರಿನಲ್ಲಿ ಕುಳಿತಿದ್ದ ಸೀರೆ ವ್ಯಾಪಾರಿ  ಪಾಪಣ್ಣ ಹಾಗೂ ಅವರ ಸ್ನೇಹಿತ ಮುರುಗನ್ ಮೇಲೆ ಆಗಿನ ಕೌನ್ಸಿಲರ್ ಆಗಿದ್ದ ಬಿ.ಎನ್. ಮಂಜುನಾಥ್ ರೆಡ್ಡಿ ಹಾಗೂ ಅವರ ಬೆಂಬಲಿಗರು ಹಲ್ಲೆ ನಡೆಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.