ರಾಜ್ಯ

ಅಂತ್ಯ ಸಂಸ್ಕಾರದ ವೇಳೆ ಕಣ್ಣುಬಿಟ್ಟು ಅಚ್ಚರಿಗೆ ಕಾರಣವಾಗಿದ್ದ ಮೈಸೂರು ಮಹಿಳೆ ಸಾವು

ಅನಾರೋಗ್ಯದಿಂದಾಗಿ ಮಹಿಳೆ ಮೃತಪಟ್ಟಿದ್ದಾರೆಂದು ಭಾವಿಸಿ ಅಂತ್ಯಕ್ರಿಯೆ ಮಾಡುವ ವೇಳೆ ಕಣ್ಣು ಬಿಟ್ಟು ಅಚ್ಚರಿಗೆ ಕಾರಣವಾಗಿದ್ದ ಮೈಸೂರು ಮೂಲದ ಮಹಿಳೆ ಸೋಮವಾರ ಮೃತಪಟ್ಟಿದ್ದಾರೆ...

ಅಂತ್ಯ ಸಂಸ್ಕಾರದ ವೇಳೆ ಕಣ್ಣುಬಿಟ್ಟು ಅಚ್ಚರಿಗೆ ಕಾರಣವಾಗಿದ್ದ ಮೈಸೂರು ಮಹಿಳೆ ಸಾವು
Published On :

ಮೈಸೂರು: ಅನಾರೋಗ್ಯದಿಂದಾಗಿ ಮಹಿಳೆ ಮೃತಪಟ್ಟಿದ್ದಾರೆಂದು ಭಾವಿಸಿ ಅಂತ್ಯಕ್ರಿಯೆ ಮಾಡುವ ವೇಳೆ ಕಣ್ಣು ಬಿಟ್ಟು ಅಚ್ಚರಿಗೆ ಕಾರಣವಾಗಿದ್ದ ಮೈಸೂರು ಮೂಲದ ಮಹಿಳೆ ಸೋಮವಾರ ಮೃತಪಟ್ಟಿದ್ದಾರೆ.

ಬಸವೇಶ್ವರ ರಸ್ತೆಯ ನಿವಾಸಿಯಾಗಿರುವ ಪದ್ಮಬಾಯಿ (59) ಮೃತಪಟ್ಟ ಮಹಿಳೆ. ಪದ್ಮಬಾಯಿ ಅವರಿಗೆ ತೀವ್ರ ಅನಾರೋಗ್ಯ ಸಮಸ್ಯೆಯುಂಟಾದ ಕಾರಣ ಅವರನ್ನು ಮೇ.15 ರಂದು ಲಕ್ಷ್ಮೀಪುರಂನ ನರ್ಸಿಂಗ್ ಹೋಂನಲ್ಲಿ ದಾಖಲು ಮಾಡಲಾಗಿತ್ತು. ಪದ್ಮ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರಿಗೆ ವೆಂಟಿಲೇಟರ್ ನ್ನು ನೀಡಲಾಗಿತ್ತು. ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಪದ್ಮ ಅವರು ಬದುಕುಳಿಯುವ ಸಾಧ್ಯತೆ ಬಹಳ ಕಡಿಮೆ ಎಂದು ಹೇಳಿದ್ದರು.

ಇದರಂತೆ ಕುಟುಂಬಸ್ಥರ ಒಪ್ಪಿಗೆ ಮೇರೆಗೆ ವೆಂಟಿಲೇಟರ್ ನ್ನು ತೆಗೆಯಲಾಗಿದೆ. ನಂತರ ಆಸ್ಪತ್ರೆಯಿಂದ ಪದ್ಮ ಅವರನ್ನು ಬಿಡುಗಡೆ ಮಾಡಿದ್ದಾರೆ. ವೈದ್ಯರು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿದ ಕುಟುಂಬಸ್ಥರು ಪದ್ಮ ಅವರು ಸಾವನ್ನಪ್ಪಿದ್ದಾರೆಂದು ತಿಳಿದು ಅಂತಿಮ ಸಂಸ್ಕಾರಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

ಇದರಂತೆ ಪದ್ಮ ಅವರು ಸಾವನ್ನಪ್ಪಿದ್ದಾರೆಂದು ಪತ್ರಿಕೆಗಳಲ್ಲಿ ಜಾಹೀರಾತನ್ನು ಪ್ರಕಟಿಸಿದ್ದಾರೆ. ಇನ್ನೇನು ಪದ್ಮ ಅವರ ಅಂತಿಮ ಸಂಸ್ಕಾರ ನಡೆಸಬೇಕೆನ್ನುವಷ್ಟರಲ್ಲಿ ಪದ್ಮ ಅವರು ಉಸಿರಾಡುತ್ತಿರುವುದು ಸಂಬಂಧಿಕರಿಗೆ ತಿಳಿದಿದೆ. ನಂತರ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮತ್ತೆ ಅವರಿಗೆ ವೆಂಟಿಲೇಟರ್ ನೀಡಲಾಗಿದೆ.

ಇದಾದ ಎರಡು ದಿನಗಳ ನಂತರವೂ ಪದ್ಮ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಇದರಂತೆ ಚಿಕಿತ್ಸೆ ಫಲಕಾರಿಯಾಗದೇ ಪದ್ಮ ಆವರು ಕಳೆದ ರಾತ್ರಿ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.