ಪಿಯುಸಿ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ
ಬಹು ನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ...

ಬೆಂಗಳೂರು: ಬಹು ನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ, ಉಡುಪಿ ದ್ವಿತೀಯ, ಕೊಡಗು ತೃತೀಯ ಹಾಗೂ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. 91 ಕಾಲೇಜುಗಳು ಶೂನ್ಯ ಫಲಿತಾಂಶ ಬಂದಿದೆ ಎಂದು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಶೇ.90.48ರಷ್ಟು ವಿದ್ಯಾರ್ಥಿಗಳು ತೇರ್ಗಡೆ, ಉಡುಪಿ ಜಿಲ್ಲೆಯಲ್ಲಿ ಶೇ.90.35ರಷ್ಟು ವಿದ್ಯಾರ್ಥಿಗಳು ಪಾಸ್. ಕೊಡಗು ಜಿಲ್ಲೆಯಲ್ಲಿ ಶೇ.79.35ರಷ್ಟು ವಿದ್ಯಾರ್ಥಿಗಳು ಪಾಸ್. ಯಾದಗಿರಿ ಜಿಲ್ಲೆಯಲ್ಲಿ ಶೇ.44.16ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.60.54ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದರು. ಪ್ರಸಕ್ತ ವರ್ಷ 57.28ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಬಳ್ಳಾರಿ ಜಿಲ್ಲೆ ಕೂಡ್ಲಗಿ ತಾಲೂಕಿನ ಕೊಟ್ಟೂರಿನ ಹಿಂದೂ ಪಿಯು ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಅನಿತಾ ಬಸಪ್ಪ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅನಿತಾ ಬಸಪ್ಪ ಕೊಟ್ಟೂರು ಬಸ್ ಸ್ಟ್ಯಾಂಡ್ ನಲ್ಲಿ ಬಾಳೆಹಣ್ಣಿನ ವ್ಯಾಪಾರಿಯಾಗಿದ್ದಾರೆ.
ಇನ್ನೂ ವಿಜ್ಞಾನ ವಿಭಾಗದಲ್ಲಿ ಬೆಂಗಳೂರಿನ ರಕ್ಷಿತಾ ಇಡೀ ರಾಜ್ಯಕ್ಕೆ ಟಾಪರ್ ಆಗಿದ್ದಾರೆ, ವಾಣಿಜ್ಯ ವಿಭಾಗದಲ್ಲಿ ಮೌಂಟ್ ಕಾರ್ಮೆಲ್ ಕಾಲೇಜಿನ ಸಹನಾ ಕುಲಕರ್ಣಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಗುರುವಾರ ಆಯಾ ಪಿಯು ಕಾಲೇಜುಗಳಲ್ಲಿ ಫಲಿತಾಂಶ ದೊರೆಯಲಿದೆ.
ಸರ್ಕಾರದ www.karresults.nic.in ಮತ್ತು www.puc.kar.nic.in ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


