ಬಾಳೆಹಣ್ಣು ವ್ಯಾಪಾರಿಯ ಮಗಳು ಪಿಯುಸಿ ಕಲಾ ವಿಭಾಗದಲ್ಲಿ ಟಾಪರ್
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಕಲಾ ವಿಭಾಗದಲ್ಲಿ ಬಾಳೆಹಣ್ಣು ವ್ಯಾಪಾರಿಯ ಮಗಳು ಅನಿತಾ ಬಸಪ್ಪ...

Published On :
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಕಲಾ ವಿಭಾಗದಲ್ಲಿ ಬಾಳೆಹಣ್ಣು ವ್ಯಾಪಾರಿಯ ಮಗಳು ಅನಿತಾ ಬಸಪ್ಪ 600ಕ್ಕೆ 594 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.
ಬಳ್ಳಾರಿ ಜಿಲ್ಲೆ ಕೂಡ್ಲಗಿ ತಾಲೂಕಿನ ಕೊಟ್ಟೂರಿನ ಇಂದೂ ಪಿಯು ಕಾಲೇಜಿನ ವಿದ್ಯಾರ್ಥಿನಿ ಅನಿತಾ ಬಸಪ್ಪ ಅವರ ತಂದೆ ಕೊಟ್ಟೂರು ಬಸ್ ನಿಲ್ದಾಣದಲ್ಲಿ ಬಾಳೆಹಣ್ಣಿನ ವ್ಯಾಪಾರಿಯಾಗಿದ್ದಾರೆ.
ಪರೀಕ್ಷೆ ಸಂದರ್ಭದಲ್ಲಿ ಕರೆಂಟ್ ಕಟ್ ಮಾಡುತ್ತಿದ್ದರು. ಅನಿತಾ ಸೀಮೆಎಣ್ಣೆ ಮತ್ತು ಕ್ಯಾಂಡಲ್ ಬೆಳಕಿನಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದಳು. ಸಾಮಾನ್ಯವಾಗಿ ಎಲ್ಲಾ ಪರೀಕ್ಷೆಗಳಲ್ಲೂ ಅನಿತಾ ಉತ್ತಮ ಅಂಕ ಪಡೆಯುತ್ತಿದ್ದಳು ಎಂದು ಶಿಕ್ಷಕರು ಶ್ಲಾಘಿಸಿದ್ದಾರೆ.
ಇನ್ನು ತಾನು ಪ್ರಥಮ ರ್ಯಾಂಕ್ ಪಡೆದಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಅನಿತಾ, ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುತ್ತೇನೆಂದು ನಿರೀಕ್ಷಿಸಿರಲಿಲ್ಲ. ಆದರೆ 580ಕ್ಕೂ ಹೆಚ್ಚು ಅಂಕ ಪಡೆಯುತ್ತೇನೆನ್ನುವ ನಂಬಿಕೆ ಇತ್ತು ಎಂದು ಅನಿತಾ ಸಂತಸ ವ್ಯಕ್ತಪಡಿಸಿದ್ದಾರೆ.
ನಮ್ಮ ತಾಯಿ ಗೃಹಿಣಿ. ಇಬ್ಬರು ಸಹೋದರರು. ತಂದೆ ಬಾಳೆಹಣ್ಣಿನ ವ್ಯಾಪಾರಿ. ಬಿಎ ಮುಗಿಸಿ ಸಿವಿಲ್ ಪರೀಕ್ಷೆ ತೆಗೆದುಕೊಳ್ಳಬೇಕು ಎಂಬ ಗುರಿ ಹೊಂದಿದ್ದೇನೆ ಎಂದು ಅನಿತಾ ತಿಳಿಸಿದ್ದಾರೆ.
ಇನ್ನು ಅನಿತಾ ಸಾಧನೆ ಬಗ್ಗೆ ಶ್ಲಾಘಿಸಿದ ಕಾಲೇಜು ಪ್ರಾಂಶುಪಾಲರು, ಕಳೆದ ವರ್ಷ ನೇತ್ರಾವತಿ ಎಂಬ ವಿದ್ಯಾರ್ಥಿನಿ ಪ್ರಥಮ ರ್ಯಾಂಕ್ ಪಡೆದಿದ್ದರು. ಈ ಬಾರಿ ಅನಿತಾ ರ್ಯಾಂಕ್ ಪಡೆದಿದ್ದಾಳೆ. ಇಬ್ಬರು ಬಡ ಕುಟುಂಬದಿಂದ ಬಂದವರು. ಕಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಉಚಿತ ಕೋಚಿಂಗ್ ಕ್ಲಾಸ್ ತೆಗೆದುಕೊಳ್ಳಲಾಗುತ್ತಿತ್ತು. ವಿದ್ಯಾರ್ಥಿನಿಯರ ಏಕಾಗ್ರತೆ ಮತ್ತು ಶ್ರಮದಿಂದಾಗಿ ರ್ಯಾಂಕ್ ಪಡೆಯಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


