ರಾಜ್ಯ

ಬೆಂಗಳೂರು: ಪಾದಚಾರಿಗಳ ಮೇಲೆ ಹರಿದ ಲಾರಿ- 5 ಸಾವು

ನಗರದ ರಾಷ್ಟ್ರೀಯ ಹೆದ್ದಾರಿ 207ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬರುತ್ತಿದ್ದ ಲಾರಿಯೊಂದು ಪಾದಚಾರಿಗಳ ಮೇಲೆ ಹರಿದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ...

ಬೆಂಗಳೂರು: ಪಾದಚಾರಿಗಳ ಮೇಲೆ ಹರಿದ ಲಾರಿ- 5 ಸಾವು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ನಗರದ ರಾಷ್ಟ್ರೀಯ ಹೆದ್ದಾರಿ 207ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬರುತ್ತಿದ್ದ ಲಾರಿಯೊಂದು ಪಾದಚಾರಿಗಳ ಮೇಲೆ ಹರಿದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ಸವಿತಾ (36), ಶಾಂತಮ್ಮ (40), ಸುಪ್ರೀತಾ (19), ಭಾವನಾ (12), ಶಶಿಕಲಾ (32) ಸಾವನ್ನಪ್ಪಿದ್ದ ದುರ್ದೈವಿಗಳಾಗಿದ್ದು, ಇವರು ಚಿಕ್ಕಬೆಳವಂಗಲ ಗ್ರಾಮ ನಿವಾಸಿಗಳಾಗಿದ್ದಾರೆ. ಇನ್ನು ಅಪಘಾತದ ವೇಳೆ ಶಾಂತಮ್ಮ (45), ನಾಗರತ್ಮಮ್ಮ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಾವನ್ನಪ್ಪಿದ್ದವರೆಲ್ಲರೂ ಒಂದೇ ಕುಟುಂಬದವರಾಗಿದ್ದು, ನಿನ್ನೆ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟದಲ್ಲಿ ನಡೆಸಲಾಗುತ್ತಿದ್ದ ಸಂಬಂಧಿಕರೊಬ್ಬರ ವಿವಾಹಕ್ಕೆ ಹೋಗಿ ರಾತ್ರಿ 8.30ರ ಸುಮಾರಿಗೆ ಚಿಕ್ಕ ಬೆಳವಂಗಲದ ರಾಷ್ಟ್ರೀಯ ಹೆದ್ದಾರಿ 207ರಲ್ಲಿ ನಡೆದು ಹೋಗುತ್ತಿದ್ದರು. ಈ ವೇಳೆ ಡಿಬಿ ವರಂಗಲ ಹೋಬ್ಳಿಯಿಂದ ವೇಗವಾಗಿ ಬರುತ್ತಿದ್ದ ಲಾರಿ ಪಾದಚಾರಿಗಳ ಮೇಲೆ ಹರಿದಿದೆ.

ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಕೂಡಲೇ ಸ್ಥಳೀಯರು 108 ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಇದರಂತೆ ಸ್ಥಳದಲ್ಲಿ ನಾಲ್ವರು ಮೃತಪಟ್ಟಿರುವುದು ತಿಳಿದಿದೆ. ನಂತರ ತೀವ್ರವಾಗಿ ಗಾಯಗೊಂಡಿದ್ದ ಭಾವನಾಳನ್ನು ಸಿಬ್ಬಂದಿಗಳು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಈ ವೇಳೆ ದಾರಿ ಮಧ್ಯೆಯೇ ಭಾವನಾ ಕೂಡ ಮೃತಪಟ್ಟಿದ್ದಾರೆ.

ನಂತರ ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳದಲ್ಲಿದ್ದ ಲಾರಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಲಾರಿ ಚಾಲಕನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು ತನಿಖೆ ನಡೆಸುತ್ತಿದ್ದಾರೆ.

ಲಾರಿ ಚಾಲಕನನ್ನು ಸತೀಶ್ ಕುಮಾರ್ ಎಂದು ಹೇಳಲಾಗುತ್ತಿದ್ದು, ಈತ ಧರ್ಮಪುರಿಯ ನಿವಾಸಿಯಾಗಿದ್ದಾನೆಂದು ತಿಳಿದುಬಂದಿದೆ. ಪ್ರಸ್ತುತ ಈತನ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 279, 337 ಮತ್ತು 307(ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.