ರಾಜ್ಯ

ಶ್ಯಾಂ ಭಟ್ ಆಯ್ಕೆ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

ಕೆಪಿಎಸ್ ಸಿ ಮುಖ್ಯಸ್ಥ ಸ್ಥಾನಕ್ಕೆ ಶ್ಯಾಂ ಭಟ್ ಹೆಸರನ್ನು ಅಂತಿಮಗೊಳಿಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಮರ್ಥಿಸಿಕೊಂಡಿದ್ದಾರೆ...

ಶ್ಯಾಂ ಭಟ್ ಆಯ್ಕೆ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್
Published On :

ಮೈಸೂರು: ಕೆಪಿಎಸ್ ಸಿ ಮುಖ್ಯಸ್ಥ ಸ್ಥಾನಕ್ಕೆ ಶ್ಯಾಂ ಭಟ್ ಹೆಸರನ್ನು ಅಂತಿಮಗೊಳಿಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಮರ್ಥಿಸಿಕೊಂಡಿದ್ದಾರೆ.

ಕೆಪಿಎಸ್ ಸಿ ಮುಖ್ಯಸ್ಥ ಸ್ಥಾನಕ್ಕೆ ಶ್ಯಾಂ ಭಟ್ ಹೆಸರನ್ನು ಅಂತಿಮಗೊಳಿಸಿರುವುದಕ್ಕೆ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿ ನಾಯಕ ಜಗದೀಶ್ ಮಾಡುತ್ತಿರುವ ಆರೋಪಗಳು ಸತ್ಯಕ್ಕೆ ದೂರವಾದದ್ದು. ಶ್ಯಾಂ ಭಟ್ ನೇಮಕಾತಿ ಕುರಿತು ರಾಜ್ಯಪಾಲರು ಸ್ಪಷ್ಟನೆ ಕೇಳಿಲ್ಲ ಎಂದು ಹೇಳಿದ್ದಾರೆ.

ಸರ್ಕಾರದ ಹೆಸನ್ನು ಹಾಳುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಕೆಪಿಎಸ್ ಸಿ ಮುಖ್ಯಸ್ಥ ಸ್ಥಾನಕ್ಕೆ ಸರ್ಕಾರ ಸೂಕ್ತ ಹೆಸರನ್ನು ಸೂಚಿಸಿದೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯಸಭಾ ಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಬೇಕಿದ್ದು, ಹೆಸರು ಅಂತಿಮ ಜವಾಬ್ದಾರಿಯನ್ನು ಹೈ ಕಮಾಂಡ್ ನೋಡಿಕೊಳ್ಳಲಿದೆ. ಹೈ ಕಮಾಂಡ್ ಜೊತೆಗಿನ ಮಾತುಕತೆ ವೇಳೆ ಸಂಪುಟ ಪುನಾರಚನೆ ಕುರಿತಂತೆಯೂ ಮಾತುಕತೆ ನಡೆಸಲಾಗುತ್ತದೆ. ಇನ್ನು ರಾಜ್ಯ ಬರ ಪರಸ್ಥಿತಿ ಕುರಿತಂತೆ ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸಲು ಕಾಲಾವಕಾಶ ಬೇಕಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.