ಸಿಇಟಿ ಫಲಿತಾಂಶ ಪ್ರಕಟ: ಅನಂತ್ ಜಿ, ಮಿಲಿಂದ್ ಕುಮಾರ್, ಮೃದುಲಾ ಟಾಪರ್ಸ್
2016ನೇ ಸಾಲಿನ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ವೈದ್ಯಕೀಯದಲ್ಲಿ ಮೂಡಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ...

Published On :
ಬೆಂಗಳೂರು: 2016ನೇ ಸಾಲಿನ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ವೈದ್ಯಕೀಯದಲ್ಲಿ ಮೂಡಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಅನಂತ್ ಜಿ, ಇಂಜಿನಿಯರಿಂಗ್ ನಲ್ಲಿ ಬೆಂಗಳೂರು ಸರ್ದಾರ್ ವಲ್ಲಭಭಾಯ್ ಕಾಲೇಜಿನ ವಿದ್ಯಾರ್ಥಿ ಮಿಲಿಂದ್ ಕುಮಾರ್ ಹಾಗೂ ಆರ್ಕಿಟೆಕ್ಚರ್ ನಲ್ಲಿ ಬೆಂಗಳೂರಿನ ಸಿಎಂಆರ್ ಇನ್ ಸ್ಟಿಟ್ಯೂಟ್ ವಿದ್ಯಾರ್ಥಿನಿ ಮೃದುಲಾ, ಹೋಮಿಯೋಪತಿಯಲ್ಲಿ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ವಿದ್ಯಾರ್ಥಿ ಸಂಜಯ್ ಎಂ ಗೌಡರ್ ಪ್ರಥಮ ಸ್ಥಾನ ಗಳಿಸಿದ್ದಾರೆ.
ಇಂಜಿನಿಯರ್ ಕೋರ್ಸ್ ಗಳಿಗೆ 1.71, 983 ವಿದ್ಯಾರ್ಥಿಗಳು ಹಾಗೂ ವೈದ್ಯಕೀಯ ಕೋರ್ಸ್ ಗಳಿಗೆ 1,34,635 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದರು. ಶನಿವಾರ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಟಿ ಬಿ ಜಯಚಂದ್ರ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಫಲಿತಾಂಶವನ್ನು ಪ್ರಕಟಿಸಿದರು.
ವಿದ್ಯಾರ್ಥಿಗಳು http://www.kea.kar.nic.in/ ವೆಬ್ ಸೈಟ್ ಗೆ ಭೇಟಿ ನೀಡಿ ಫಲಿತಾಂಶವನ್ನು ನೋಡಬಹುದು.
ಸಿಇಟಿಯಲ್ಲಿ ದ್ವಿತೀಯ ಸ್ಥಾನ ಪಡೆದವರು
ಇಂಜಿನಿಯರಿಂಗ್ -ನಿರಂಜನ್ ಕಾಮತ್- ಮಂಗಳೂರು ಎಕ್ಸ್ ಫರ್ಟ್ ಕಾಲೇಜು
ವೈದ್ಯಕೀಯ-ಸಂಜಯ್ ಗೌಡರ್- ಶೇಷಾಧ್ರಿಪುರಂ ಕಾಲೇಜು, ಬೆಂಗಳೂರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


