ಪೊಲೀಸರು ಸಾಮೂಹಿಕ ರಜೆ ತೆಗೆದುಕೊಂಡರೆ ಕಠಿಣ ಕ್ರಮ: ಸಿದ್ದರಾಮಯ್ಯ
ಸಾಮೂಹಿಕ ರಜೆ ತೆಗೆದುಕೊಂಡು ಪ್ರತಿಭಟನೆ ನಡೆಸಲು ತೀರ್ಮಾನ ಕೈಗೊಂಡಿರುವ ಪೊಲೀಸರು ತಮ್ಮ ನಿರ್ಧಾರದಿಂದ ಹೊರ ಬರದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಬೆಂಗಳೂರು: ಸಾಮೂಹಿಕ ರಜೆ ತೆಗೆದುಕೊಂಡು ಪ್ರತಿಭಟನೆ ನಡೆಸಲು ತೀರ್ಮಾನ ಕೈಗೊಂಡಿರುವ ಪೊಲೀಸರು ತಮ್ಮ ನಿರ್ಧಾರದಿಂದ ಹೊರ ಬರದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನಯಷ್ಟೇ ಪೊಲೀಸರ ಪ್ರತಿಭಟನೆ ವಿಚಾರ ಕುರಿತಂತೆ ಗೃಹ ಸಚಿವ ಜಿ. ಪರಮೇಶ್ವರ್ ಹಾಗೂ ಹಿರಿಯ ಪೊಲೀಸರ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಬಳಿಕ ಮಾತನಾಡಿರುವ ಅವರು, ಪ್ರತಿಭಟನೆ ನಡೆಸಲು ತೀರ್ಮಾನಿಸಿರುವ ಪೊಲೀಸರನ್ನು ವಿಚಾರಣೆ ನಡೆಸಲಾಗುತ್ತದೆ. ಈ ಬಗ್ಗೆ ತನಿಖೆಯನ್ನು ನಡೆಸಲಾಗುತ್ತದೆ. ಇನ್ನು ಪ್ರತಿಭಟನೆ ನಡೆಸಲು ಕರೆ ಕೊಟ್ಟಿರುವ ಸಂಘಟನೆ ಅಧಿಕೃತ ಸಂಘಟನೆಯಲ್ಲ. ಹೀಗಾಗಿ ಸಾಮೂಹಿಕ ರಜೆ ಪಡೆದು ಪ್ರತಿಭಟನೆ ನಡೆಸಲು ತೀರ್ಮಾನಿಸಿರುವ ಪೊಲೀಸರು ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲದೆ ಹೋದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


