ಉಲ್ಟಾ ಹೊಡೆದ ಲೆಕ್ಕಾಚಾರ: ದೀಪಾವಳಿಯಂದು ಬೆಂಗಳೂರಲ್ಲಿ ಹೆಚ್ಚಿದ ಮಾಲಿನ್ಯ
ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಪಟಾಕಿ ವಿರೋಧಿ ಶಿಬಿರಗಳ ಮೂಲಕ ಜನರಿಗೆ ಈ ವರ್ಷ ಜಾಗೃತಿ ಮೂಡಿಸಿದ ಹಿನ್ನೆಲೆಯಲ್ಲಿ ಈ ಬಾರಿ ಮಾಲಿನ್ಯ...

ಬೆಂಗಳೂರು: ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಪಟಾಕಿ ವಿರೋಧಿ ಶಿಬಿರಗಳ ಮೂಲಕ ಜನರಿಗೆ ಈ ವರ್ಷ ಜಾಗೃತಿ ಮೂಡಿಸಿದ ಹಿನ್ನೆಲೆಯಲ್ಲಿ ಈ ಬಾರಿ ಮಾಲಿನ್ಯ ಕಡಿಮೆಯಾಗಬಹುದೆಂಬ ಲೆಕ್ಕಾಚಾರ ಉಲ್ಟಾ ಹೊಡೆದಿದೆ. ಪ್ರತಿ ವರ್ಷಕ್ಕಿಂತ ಈ ವರ್ಷ ಮಾಲಿನ್ಯದ ಪ್ರಮಾಣ ಹೆಚ್ಚಿದೆ.ಆದರೆ ಟ್ರಾಫಿಕ್ ಪ್ರಮಾಣ ಕಡಿಮೆಯಾಗಿದೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಎರಡು ದಿನಗಳ ಕಾಲ ನಿರಂತರ ವಾಯು ಗುಣಮಟ್ಟದ ಪರಿಸ್ಥಿತಿ ಅವಲೋಕನದಿಂದ ಈ ಮಾಹಿತಿ ತಿಳಿದು ಬಂದಿದೆ.
ಈ ವರ್ಷದ ದೀಪಾವಳಿಯಲ್ಲಿ ಹೆಚ್ಚಿರುವ ಮಾಲಿನ್ಯದಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಅಲರ್ಜಿ ಮತ್ತು ಉಸಿರಾಟದ ಸಮಸ್ಯೆಗಳು ಹೆಚ್ಚಾಗಿವೆ. ರಾಜ್ಯ ವಾಯಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರಿನ 13 ಕೇಂದ್ರಗಳ ಮಾಲಿನ್ಯ ಮಟ್ಟವನ್ನು ಪರಿಶೀಲಿಸಿದಾಗ ಮಾಲಿನ್ಯ ಪ್ರಮಾದ ಹೆಚ್ಚಿರುವುದು ಕಂಡು ಬಂದಿದೆ. ಕಳೆದ ಬಾರಿಗೆ ಹೋಲಿಸಿದರೇ ಈ ವರ್ಷದ ದೀಪಾವಳಿಯಲ್ಲಿ ವಾಯು ಮಾಲಿನ್ಯದ ಪ್ರಮಾಣ ಹೆಚ್ಚಿರುವುದು ಕಂಡು ಬಂದಿದೆ.
ಸಹಜ ದಿನಗಳಲ್ಲಿ ರಜಾದಿನಗಳಲ್ಲಿ ವಾಹನಗಳ ಓಡಾಟ ಕಡಿಮೆ ಇರುತ್ತಿದ್ದ ಕಾರಣ ಮಾಲಿನ್ಯದ ಪ್ರಮಾಣ ತಗ್ಗುತ್ತಿತ್ತು. ಆದರೆ ದೀಪಾವಳಿ ಕಾರಣವಾಹನಗಳ ಓಡಾಟ ಕಡಿಮೆಯಾಗಿದ್ದರೂ ಮಾಲಿನ್ಯದ ಪ್ರಮಾಣದಲ್ಲಿ ಇಳಿಕೆಯಾಗಿಲ್ಲ. ಜೊತೆಗೆ ವಾಯು ಮಾಲಿನ್ಯದ ಜೊತೆಗೆ ಶಬ್ದ ಮಾಲಿನ್ಯದಲ್ಲೂ ಹೆಚ್ಚಳವಾಗಿದೆ ಎಂದು ಅಂಕಿ ಅಂಶಗಳಿಂದ ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


