ರಾಜ್ಯ

ಮರಳು ಗಣಿಗಾರಿಕೆ ನೀತಿ: ಸಮಸ್ಯೆ ಪರಿಹಾರಕ್ಕೆ ಸಮಿತಿ ರಚಿಸಲು ಸಿಎಂ ಸೂಚನೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಮರಳು ಸಮಸ್ಯೆ ಪರಿಹಾರಕ್ಕಾಗಿ ಕಾನೂನು ಸಚಿವ ಟಿ.ಬಿ. ಜಯಚಂದ್ರ ಅಧ್ಯಕ್ಷತೆಯಲ್ಲಿ ಎರಡೂ ಜಿಲ್ಲೆಗಳನ್ನು ಸಚಿವರನ್ನು ...

ಮರಳು ಗಣಿಗಾರಿಕೆ ನೀತಿ: ಸಮಸ್ಯೆ ಪರಿಹಾರಕ್ಕೆ ಸಮಿತಿ ರಚಿಸಲು ಸಿಎಂ ಸೂಚನೆ
ಸಿದ್ದರಾಮಯ್ಯ
Published On :

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಮರಳು ಸಮಸ್ಯೆ ಪರಿಹಾರಕ್ಕಾಗಿ ಕಾನೂನು ಸಚಿವ ಟಿ.ಬಿ. ಜಯಚಂದ್ರ ಅಧ್ಯಕ್ಷತೆಯಲ್ಲಿ ಎರಡೂ ಜಿಲ್ಲೆಗಳನ್ನು ಸಚಿವರನ್ನು ಒಳಗೊಂಡ ಸಂಪುಟ ಉಪಸಮಿತಿ  ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ಈ ಎರಡು ಜಿಲ್ಲೆಗಳ ಮರಳು ಸಮಸ್ಯೆ, ಮೀನುಗಾರರ ಸಮಸ್ಯೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ರಾಜ್ಯಸಭಾ ಸದಸ್ಯರ ಜತೆ ವಿಧಾನಸೌಧದಲ್ಲಿ ಗುರುವಾರ ಚರ್ಚಿಸಿದ ಬಳಿಕ ಮುಖ್ಯಮಂತ್ರಿ  ಈ ಸೂಚನೆ ನೀಡಿದರು.

ಮರಳು ನೀತಿ ಜಾರಿಗೆ ಬಂದ ಬಳಿಕ ಎರಡೂ ಜಿಲ್ಲೆಗಳಲ್ಲಿ ಮರಳು ತೆಗೆಯುವುದು ಸಾಧ್ಯವಿಲ್ಲವಾಗಿದೆ. ಇದರಿಂದಾಗಿ ನಿರ್ಮಾಣ ಕಾಮಗಾರಿಗಳಿಗೆ ದೊಡ್ಡ ಮಟ್ಟದ ಹಿನ್ನಡೆಯಾಗಿದೆ. ಮರಳು ನೀತಿಯಿಂದ ವಿನಾಯಿತಿ ನೀಡಬೇಕು ಎಂದು ಎರಡು ಜಿಲ್ಲೆಗಳ ಶಾಸಕರು ಮನವಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.