ಗೋಕರ್ಣ ದೇವಾಲಯಕ್ಕೆ ಐಎಸ್ ಒ ಪ್ರಮಾಣಪತ್ರ
ಗೋಕರ್ಣದ ಐತಿಹಾಸಿಕ ಮಹಾಬಲೇಶ್ವರ ದೇವಾಲಯಕ್ಕೆ ಐಎಸ್ ಒ 9001:2008 ಪ್ರಮಾಣ ಪತ್ರ ದೊರೆತಿದೆ...

ಕಾರವಾರ; ಗೋಕರ್ಣದ ಐತಿಹಾಸಿಕ ಮಹಾಬಲೇಶ್ವರ ದೇವಾಲಯಕ್ಕೆ ಐಎಸ್ ಒ 9001:2008 ಪ್ರಮಾಣ ಪತ್ರ ದೊರೆತಿದೆ.
ಇತ್ತೀಚೆಗೆ ದೇವಾಸ್ಥಾನಕ್ಕೆ ಉತ್ತಮ ಆಡಳಿತ ಮತ್ತು ನಿರ್ವಹಣೆಗಾಗಿ ಐಎಸ್ ಒ ಮಾನ್ಯತೆ ದೊರಕಿತ್ತು. ಜರ್ಮನಿಯ ಗುಣಮಟ್ಟ ನಿರ್ವಹಣಾ ವ್ಯವಸ್ಥೆ ಪ್ರಮಾಣೀಕರಣ ಕಂಪನಿಯು ಗೋಕರ್ಣಕ್ಕೆ ಭೇಟಿ ನೀಡಿ, ಸ್ವಚ್ಛತೆ, ಪ್ರಸಾದ ಹಂಚಿಕೆ, ರಕ್ಷಣಾ ಹಾಗೂ ಭದ್ರತೆಗೆ ಸಂಬಂಧಪಟ್ಟಂತೆ ಪರಿಶೀಲನೆ ನಡೆಸಿ, ದೇವಾಲಯಕ್ಕೆ ಐಎಸ್ ಒ ಪ್ರಮಾಣ ಪತ್ರ ನೀಡಿತ್ತು.
2008 ಕ್ಕಿಂತ ಮುಂಚೆ ಗೋಕರ್ಣ ದೇವಾಲಯ ರಾಜ್ಯ ಸರ್ಕಾರದ ಅಧೀನದಲ್ಲಿತ್ತು, ನಂತರ ರಾಮಚಂದ್ರಾಪುರ ಮಠದ ಆಡಳಿತಕ್ಕೆ ಒಳಪಟ್ಟಿತು. ಮಠದ ಆಡಳಿತಾವಧಿಯಲ್ಲಿ ದೇವಾಲಯದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ನಡೆದವು. ದೇಶದ ವಿವಿಧ ಭಾಗಗಳಿಂದ ಗೋಕರ್ಣ ದೇವಾಲಯಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


