ರಾಜ್ಯ

ರೆಡ್ಡಿ ಕುಟುಂಬದ ಮದುವೆಯಿಂದ ಬೆಂಗಳೂರಿನಲ್ಲಿ ವಾಹನ ದಟ್ಟಣೆಯ ಭೀತಿ

ಮಾಜಿ ಸಚಿವ ಗಣಿ ಧಣಿ ಜನಾರ್ಧನ್ ರೆಡ್ಡಿ ಅವರ ಪುತ್ರಿಯ ಮದುವೆ ಅರಮನೆ ಮೈದಾನದಲ್ಲಿ ಬುಧವಾರ ನಡೆಯಲಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗುವ ಸಾಧ್ಯತೆಯಿದ್ದು ವಿಮಾನ ನಿಲ್ದಾಣ ರಸ್ತೆಯಲ್ಲಿ...

ರೆಡ್ಡಿ ಕುಟುಂಬದ ಮದುವೆಯಿಂದ ಬೆಂಗಳೂರಿನಲ್ಲಿ ವಾಹನ ದಟ್ಟಣೆಯ ಭೀತಿ
ರೆಡ್ಡಿ ಕುಟುಂಬದ ಮದುವೆಗಾಗಿ ಅರಮನೆ ಮೈದಾನದಲ್ಲಿ ಕಂಡು ಬಂಡ ಖಾಸಗಿ ಭದ್ರತೆ
Published On :
ಬೆಂಗಳೂರು: ಮಾಜಿ ಸಚಿವ ಗಣಿ ಧಣಿ ಜನಾರ್ಧನ್ ರೆಡ್ಡಿ ಅವರ ಪುತ್ರಿಯ ಮದುವೆ ಅರಮನೆ ಮೈದಾನದಲ್ಲಿ ಬುಧವಾರ ನಡೆಯಲಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನ  ಭಾಗಿಯಾಗುವ ಸಾಧ್ಯತೆಯಿದ್ದು ವಿಮಾನ ನಿಲ್ದಾಣ ರಸ್ತೆಯಲ್ಲಿ ತೀವ್ರ ವಾಹನದಟ್ಟಣೆಯಾಗಲಿದೆ ಎಂದು ಅಂದಾಜಿಸಲಾಗಿದೆ.
ಮಂಗಳವಾರ ಮತ್ತು ಬುಧವಾರ ಬಳ್ಳಾರಿ ರಸ್ತೆಯಲ್ಲಿ ವಾಹನ ದಟ್ಟಣೆ ತೀವ್ರಾವಾಗುವ ಸಾಧ್ಯತೆಯಿದೆ. ರೆಡ್ಡಿ ಸಹೋದರರು ಅರಮನೆ ಮೈದಾನವನ್ನು ಈಗಾಗಲೇ ವಶಕ್ಕೆ ತೆಗೆದುಕೊಂಡಿದ್ದು, ವಿಜಯನಗರ ಸಾಮ್ರಾಜ್ಯದ ವೈಭವವನ್ನು ಅತಿಥಿಗಳಿಗೆ ತೋರಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಮೈದಾನದಲ್ಲಿ ಖಾಸಗಿ ಭದ್ರತೆಯನ್ನು ಹಾಕಲಾಗಿದ್ದು, ಎಲ್ಲ ದ್ವಾರಗಳಲ್ಲೂ ಬೌನ್ಸರ್ ಗಳನ್ನೂ ನಿಯೋಜಿಸಲಾಗಿದೆ. ಸಾರ್ವಜನಿಕರು ಮತ್ತು ಮಾಧ್ಯಮಗಳಿಗೆ ಪ್ರವೇಶವನ್ನು ನಿಷೇಧಗೊಳಿಸಲಾಗಿದೆ. 
ಸಾಮಾನ್ಯವಾಗಿ ಅರಮನೆ ಮೈದಾನದಲ್ಲಿ ನಡೆಯುವ ಮದುವೆಗಳು ಒಡೆಯರ್ ಕುಟುಂಬಕ್ಕೆ ಸೇರಿದ ಖಾಸಗಿ ಅರಮನೆಯಲ್ಲಿ ನಡೆಯುತ್ತವೆ. ಈಗ ಅರಮನೆ ಮೈದಾನದಲ್ಲಿ ರೆಡ್ಡಿ ಸಹೋದರರು ವಿಜಯನಗರ ಸಾಮ್ರಾಜ್ಯವನ್ನು ಸೃಷ್ಟಿಸಲು ಮುಂದಾಗಿದ್ದಾರೆ. 
ಬಳ್ಳಾರಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾದಾದ್ಯಂತ ಮದುವೆಗೆ ಆಮಂತ್ರಣ ನೀಡಿದ್ದಾರೆ. ಹಾಗೆಯೇ ಜನಾರ್ಧನ್ ರೆಡ್ಡಿ ಅಭಿಮಾನಿಗಳ ಸಂಘ ಫೇಸ್ಬುಕ್ ಪುಟದಲ್ಲಿ ಕೂಡ ಮದುವೆಗೆ ಕರೆಯೋಲೆ ನೀಡಲಾಗಿದೆ.  
ಬಳ್ಳಾರಿಯ ರೆಡ್ಡಿ ಮನೆಯಿಂದ ಹೊರಡುವ ಸಾರ್ವಜನಿಕರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಳ್ಳಾರಿಯಿಂದ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ ನ್ನಲಾಗಿದೆ. 
ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಜನಾರ್ಧನ್ ರೆಡ್ಡಿ ಅವರಿಗೆ ೨೦೧೫ ರಲ್ಲಿ ಷರತ್ತುಬದ್ಧ ಜಾಮೀನು ನೀಡಿ ಬಳ್ಳಾರಿಗೆ ಹೋಗದಂತೆ ನಿಷೇಧಿಸಲಾಗಿತ್ತು. ಆದರೆ ಮಗಳ ಮದುವೆಗೋಸ್ಕರ ನವೆಂಬರ್ ೧ ರಿಂದ ನವೆಂಬರ್ ೨೧ ರವರೆಗೆ ಬಳ್ಳಾರಿ ಪ್ರವೇಶಕ್ಕೆ ಕೋರ್ಟ್ ಅವಕಾಶ ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.