ಅಶ್ಲೀಲ ಚಿತ್ರ ವೀಕ್ಷಣೆ ಪ್ರಕರಣ: ಟಿವಿ9 ವಿರುದ್ಧ ಕೇಸ್ ದಾಖಲಿಸಿದ ತನ್ವೀರ್ ಸೇಠ್
ಟಿಪ್ಪು ಜಯಂತಿ ಕಾರ್ಯಕ್ರಮದ ವೇಳೆ ಅಶ್ಲೀಲ ಚಿತ್ರ ವೀಕ್ಷಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿ ಪ್ರಸಾರ ಮಾಡಿದ ಖಾಸಗಿ....

Published On :
ರಾಯಚೂರು: ಟಿಪ್ಪು ಜಯಂತಿ ಕಾರ್ಯಕ್ರಮದ ವೇಳೆ ಅಶ್ಲೀಲ ಚಿತ್ರ ವೀಕ್ಷಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿ ಪ್ರಸಾರ ಮಾಡಿದ ಖಾಸಗಿ ವಾಹಿನಿ ಟಿವಿ9 ವಿರುದ್ಧ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಕೇಸ್ ದಾಖಲಿಸಿದ್ದಾರೆ.
ಘಟನೆಯ ವರದಿ ಮಾಡಿದ ಟಿವಿ9 ವರದಿಗಾರ ಸಿದ್ದು ಬೀರಾದಾರ್ ಮತ್ತು ಛಾಯಾಗ್ರಾಹಕ ದನಂಜಯ್ ಅವರ ವಿರುದ್ಧ ರಾಯಚೂರು ಪಶ್ಚಿಮ ಠಾಣೆಯಲ್ಲಿ ಸಚಿವರು ದೂರು ದಾಖಲಿಸಿದ್ದಾರೆ.
ತನ್ವೀರ್ ಸೇಠ್ ಎಪಿಎಸ್ ಸೆಕ್ಷನ್ 504ರ ಅಡಿಯಲ್ಲಿ ಟಿವಿ9 ವರದಿಗಾರ ಹಾಗೂ ಛಾಯಾಗ್ರಾಹಕನ ವಿರುದ್ಧ ಕೇಸ್ ದಾಖಲಿಸಿದ್ದು, ದೂರಿನಲ್ಲಿ ಸುದ್ದಿ ವಾಹಿನಿ ತನಗೆ ಅಪಮಾನ ಮಾಡುವ ರೀತಿಯಲ್ಲಿ ಸುದ್ದಿಯನ್ನು ಬೀತ್ತರಿಸಿದೆ ಎಂದು ಆರೋಪಿಸಿದ್ದಾರೆ.
ತನ್ವೀರ್ ಸೇಠ್ ಅವರು ರಾಯಚೂರಿನಲ್ಲಿ ನಡೆದ ಟಿಪ್ಪುಜಯಂತಿಯ ವೇಳೆ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರಗಳನ್ನು ನೋಡಿದ್ದಾರೆ ಎಂಬ ದೃಶ್ಯದ ತುಣುಕುಗಳನ್ನು ಸುದ್ದಿವಾಹಿನಿ ಬಿತ್ತರ ಮಾಡಿತ್ತು. ಇದು ರಾಜಕೀಯ ವಲಯದಲ್ಲಿ ತೀವ್ರ ಟೀಕೆಗೆ ಕಾರಣವಾಗಿದ್ದು, ಸಚಿವರು ರಾಜಿನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಆಗ್ರಹಿಸಿವೆ. ಆದರೆ ದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮಿಂದ ಯಾವುದೇ ತಪ್ಪು ಸಂಭವಿಸಿಲ್ಲ, ಹಾಗಾಗಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸೇಠ್ ಪ್ರತಿಕ್ರಿಯೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


