ರಾಜ್ಯ

ತೆರೆದ ಸಂಪ್ ಗೆ ಬಿದ್ದು 4 ವರ್ಷದ ಮಗು ಸಾವು

ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ 4 ವರ್ಷದ ಮಗು ತೆರೆದ ಸಂಪ್ ಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮೈಸೂರಿನ ರಾಮಬಾಯಿ ನಗರದ ಅಂಬೇಡ್ಕರ್ ಸಮುದಾಯ ...

ತೆರೆದ ಸಂಪ್ ಗೆ ಬಿದ್ದು 4 ವರ್ಷದ ಮಗು ಸಾವು
ಸಾಂದರ್ಭಿಕ ಚಿತ್ರ
Published On :

ಮೈಸೂರು: ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ 4 ವರ್ಷದ ಮಗು ತೆರೆದ ಸಂಪ್ ಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮೈಸೂರಿನ ರಾಮಬಾಯಿ ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆದಿದೆ.

ಸುಭಾಷ್ ಮೃತ ದುರ್ದೈವಿ, ಸುಭಾಷ್ ನಾಗಮ್ಮ ಎಂಬುವರ ಪುತ್ರ. ಆಕಸ್ಮಿಕವಾಗಿ ಆತ ಸಂಪ್ ನೊಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಅಂಬೇಡ್ಕರ್ ಸಮುದಾಯ ಭವನದ ಪಕ್ಕದಲ್ಲಿದ್ದ ಅಂಗನವಾಡಿ ಇದೆ. ಭವನದೊಳಗೆ ಆಟವಾಡುವಾಗ ಸುಭಾಷ್ ತೆರೆದ ಬಾವಿಗೆ ಬಿದ್ದಿದ್ದಾನೆ. ಭವನದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರು ಶವವನ್ನು ಗಮನಿಸಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಶುಕ್ರವಾರ ಮಧ್ಯಾಹ್ನದಿಂದ ನಾಪತ್ತೆಯಾಗಿರುವ ತಮ್ಮ ಮಗನನ್ನು ಹುಡುಕುತ್ತಿದ್ದ ಪೋಷಕರು ಸಂಪ್ ನಲ್ಲಿ ಬಿದ್ದಿದ್ದ ಮಗನ ಶವವನ್ನು ಪತ್ತೆ ಹಚ್ಚಿದ್ದಾರೆ. ಮೃತ ಮಗುವಿನ ಪೋಷಕರು ಅಧಿಕಾರಿಗಳಿಗೆ ಬೈಯ್ದಿದ್ದಾರೆ. ಈ ಹಿಂದೆ ಸಂಪ್ ಮುಚ್ಚುವಂತೆ ಹಲವು ಬಾರಿ ಅಧಿಕಾರಿಗಳಿಗೆ ತಿಳಿಸಿದ್ದರು, ಸಂಪ್ ಮುಚ್ಚಲಿಲ್ಲ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.