ರಾಜ್ಯ

ಬೆಂಗಳೂರು: ಕೌಟುಂಬಿಕ ಕಲಹದಿಂದ ನೊಂದ ವಿವಾಹಿತ ಮಹಿಳೆ ಆತ್ಮಹತ್ಯೆ

ಕೌಟುಂಬಿಕ ಕಲಹದಿಂದಾಗಿ 25 ವರ್ಷದ ವಿವಾಹಿತ ಮಹಿಳೆಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಬಸವೇಶ್ವರ ನಗರದ ಮಂಜುನಾಥ ನಗರದಲ್ಲಿ ನಡೆದಿದೆ..

ಬೆಂಗಳೂರು: ಕೌಟುಂಬಿಕ ಕಲಹದಿಂದ ನೊಂದ ವಿವಾಹಿತ ಮಹಿಳೆ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕೌಟುಂಬಿಕ ಕಲಹದಿಂದಾಗಿ 25 ವರ್ಷದ ವಿವಾಹಿತ ಮಹಿಳೆಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಬಸವೇಶ್ವರ ನಗರದ ಮಂಜುನಾಥ ನಗರದಲ್ಲಿ ನಡೆದಿದೆ.

ಮಂಜುನಾಥ ನಗರದ ಸುಜಿತಾ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಸುಜಿತಾ ವಿನೋದ್ ಎಂಬುವವರನ್ನು ವಿವಾಹವಾಗಿದ್ದರು, ಇವರಿಗೆ 8 ತಿಂಗಳಿನ ಹೆಣ್ಣು ಮಗುವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಸಾರ ವಿಷಯ ಸಂಬಂಧ ಸುಜಿತಾ ಮತ್ತು ವಿನೋದ ಜಗಳ ವಾಡಿದ್ದಾರೆ, ನಂತರ ಪತಿ ನಿದ್ರಿಸಿದ ನಂತರ ರಾತ್ರಿ 12.30 ರ ಸುಮಾರಿಗೆ ತನ್ನ ಸೀರೆಯಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬೆಳಗ್ಗೆ ವಿನೋದ್ ಎದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ನಂತರ ವಿನೋದ್ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದಾನೆ. ವಿಚಾರಣೆಗಾಗಿ  ವಿನೋದ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.