ನ.24ರವೆರಗೂ ಹಳೆಯ ನೋಟುಗಳ ಚಲಾವಣೆ ವಿಸ್ತರಿಸಿದ ಕೇಂದ್ರ ಸರ್ಕಾರ!
ಪ್ರಮುಖ ಬೆಳವಣಿಗೆಯೊಂದರಲ್ಲಿ ನಿಷೇಧಕ್ಕೆ ಒಳಗಾಗಿರುವ ಹಳೆಯ 500 ಮತ್ತು 1000 ರು.ಮುಖಬೆಲೆಯ ನೋಟುಗಳ ಚಲಾವಣೆ ಕಾಲಾವಧಿಯನ್ನು ಕೇಂದ್ರ ಸರ್ಕಾರ ಮತ್ತೆ 10 ದಿನಕ್ಕೆ ವಿಸ್ತರಿಸಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ ನಿಷೇಧಕ್ಕೆ ಒಳಗಾಗಿರುವ ಹಳೆಯ 500 ಮತ್ತು 1000 ರು.ಮುಖಬೆಲೆಯ ನೋಟುಗಳ ಚಲಾವಣೆ ಕಾಲಾವಧಿಯನ್ನು ಕೇಂದ್ರ ಸರ್ಕಾರ ಮತ್ತೆ 10 ದಿನಕ್ಕೆ ವಿಸ್ತರಿಸಿದೆ ಎಂದು ತಿಳಿದುಬಂದಿದೆ.
ಸರ್ಕಾರಿ ಕಚೇರಿ, ಸರ್ಕಾರಿ ಸಾರಿಗೆ ಸಂಸ್ಥೆ, ಪೆಟ್ರೋಲ್ ಬಂಕ್ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಹಳೆಯ ನೋಟುಗಳ ಚಲಾವಣೆ ಕಾಲಾವಧಿಯನ್ನು ಮತ್ತೆ 10 ದಿನಗಳ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ನೋಟು ರದ್ಧತಿ ಘೋಷಣೆ ಮಾಡುವಾಗ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 14ರ ವರೆಗೂ ಹಳೆಯ ನೋಟುಗಳನ್ನು ಸರ್ಕಾರಿ ಸಂಸ್ಥೆಗಳಸಲ್ಲಿ ಬಳಕೆ ಮಾಡಬಹುದು ಎಂದು ಹೇಳಿದ್ದರು. ಅದರಂತೆ ಇಂದಿಗೆ ಹಳೆಯ ನೋಟುಗಳ ಚಲಾವಣೆ ಅಂತ್ಯವಾಗಬೇಕಿತ್ತು. ಆದರೆ ಹಳೆಯ ನೋಟುಗಳ ಚಲಾವಣೆಯನ್ನು ಮತ್ತಷ್ಟು ದಿನಗಳ ಕಾಲ ಮುಂದುವರೆಸುವಂತೆ ದೇಶಾದ್ಯಂತ ವ್ಯಾಪಕ ಮನವಿಗಳ ಕೇಳಿಬಂದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಮತ್ತೆ ಈ ಕಾಲಾವಧಿಯನ್ನು ನವೆಂಬರ್ 24ರವರೆಗೂ ವಿಸ್ತರಿಸಿದೆ.
ಆ ಮೂಲಕ ಮತ್ತೆ 10 ದಿನಗಳ ಕಾಲ ಹಳೆಯ ನೋಟುಗಳನ್ನು ಸರ್ಕಾರಿ ಕಚೇರಿ, ಸರ್ಕಾರಿ ಸಾರಿಗೆ ಸಂಸ್ಥೆ, ಪೆಟ್ರೋಲ್ ಬಂಕ್ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಬಳಕೆ ಮಾಡಲು ಕೇಂದ್ರ ಸರ್ಕಾರ ಅವಕಾಶ ನೀಡಿದೆ. ನೋಟು ನಿಷೇಧ ಘೋಷಣೆ ಹೊರಬಿದ್ದ ಬೆನ್ನಲ್ಲೇ ಬ್ಯಾಂಕ್ ಗಳತ್ತ ಹರಿಯುತ್ತಿರುವ ಜನಸ್ತೋಮ ದಿನೇ ದಿನೇ ಹೆಚ್ಚಾಗುತ್ತಿದ್ದು, ಇಂದು ಗುರುನಾನಕ್ ಜಯಂತಿ ಹೊರತಾಗಿಯೂ ಕೇಂದ್ರ ಸರ್ಕಾರದ ಆದೇಶದ ಹಿನ್ನಲೆಯಲ್ಲಿ ಬಹುತೇಕ ಬ್ಯಾಂಕ್ ಗಳು ಕಾರ್ಯ ನಿರ್ವಹಿಸುತ್ತಿವೆ. ಹೀಗಾಗಿ ಜನರು ಠೇವಣಿ ಹಾಗೂ ಹಣ ಬದಲಾವಣೆಗಾಗಿ ಬ್ಯಾಂಕ್ ಗಳ ಮುಂದೆ ಸರತಿ ಸಾಲಲ್ಲಿ ನಿಂತಿರುವುದು ಮುಂದುವರೆದಿದೆ.=
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


