ಕೊಡಗಿನಲ್ಲಿ ಆರ್ ಎಸ್ ಎಸ್ ಕಾರ್ಯಕರ್ತನ ಕಾರಿಗೆ ಬೆಂಕಿ
ದುಷ್ಕರ್ಮಿಗಳು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ ಎಸ್)ದ ಕಾರ್ಯಕರ್ತರೊಬ್ಬರ ಕಾರಿಗೆ ಬೆಂಕಿ ಹಂಚಿಸಿದ ಘಟನೆ ಕೊಡಗು...

Published On :
ಕೊಡಗು: ದುಷ್ಕರ್ಮಿಗಳು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ ಎಸ್)ದ ಕಾರ್ಯಕರ್ತರೊಬ್ಬರ ಕಾರಿಗೆ ಬೆಂಕಿ ಹಂಚಿಸಿದ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮದಲ್ಲಿ ನಡೆದಿದೆ.
ಸೋಮವಾರಪೇಟೆಯ ವಕೀಲ ಹಾಗೂ ಆರ್ ಎಸ್ ಎಸ್ ಕಾರ್ಯಕರ್ತರೂ ಆಗಿರುವ ಕೆ.ಎಸ್ ಪದ್ಮನಾಭ ಅವರ ಕಾರಿಗೆ ಭಾನುವಾರ ರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಮನೆಯ ಬಳಿ ನಿಲ್ಲಿಸಿದ್ದ ಮಿನಿ ವ್ಯಾನ್ ಗೆ ಬೆಂಕಿ ಹಚ್ಚಿ ಸ್ಫೋಟಿಸಲಾಗಿದೆ ಎಂದು ಪದ್ಮನಾಭ್ ಅವರು ಇಂಡಿಯನ್ ಎಕ್ಸಪ್ರೆಸ್ ಗೆ ತಿಳಿಸಿದ್ದಾರೆ.
ಕಾರು ಭಾಗಶಃ ಸುಟ್ಟು ಹೋಗಿದ್ದು, ಸುಟ್ಟ ಕಾರನ್ನು ಸೋಮವಾರಪೇಟೆ ಪೊಲೀಸರು ಠಾಣೆಗೆ ತೆಗೆದುಕೊಂಡು ಹೋಗಿದ್ದಾರೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಐಗೂರಿನಲ್ಲಿ ಜಮಾಯಿಸಿದ ಆರ್ ಎಸ್ ಎಸ್ ಕಾರ್ಯಕರ್ತರು, ಬೆಂಕಿ ಹಚ್ಚಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಉಪ ಪೊಲೀಸ್ ವರಿಷ್ಠಾಧಿಕಾರಿ ಸಂಪತ್ ಕುಮಾರ್ ಹಾಗೂ ಆರ್ ಎಎಫ್ ಸಿಬ್ಬಂದಿ ಆಗಮಿಸಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


