ರೆಡ್ಡಿ ಪುತ್ರಿ ವಿವಾಹಕ್ಕೆ ಹಾಜರಾಗಿ ಎಲ್ಲರ ಹುಬ್ಬೇರುವಂತೆ ಮಾಡಿದ ಗೃಹ ಸಚಿವ
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಗಣಿ ಧಣಿ ಜನಾರ್ಧನ ರೆಡ್ಡಿ ಪುತ್ರಿ ವಿವಾಹಕ್ಕೆ ಹಾಜರಾದ ಗೃಹ ಸಚಿವ ಜಿ. ಪರಮೇಶ್ವರ್ ಎಲ್ಲರ ಹುಬ್ಬೇರುವಂತೆ ...

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಗಣಿ ಧಣಿ ಜನಾರ್ಧನ ರೆಡ್ಡಿ ಪುತ್ರಿ ವಿವಾಹಕ್ಕೆ ಹಾಜರಾದ ಗೃಹ ಸಚಿವ ಜಿ. ಪರಮೇಶ್ವರ್ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.
ಬುಧವಾರ ಬೆಳಗ್ಗೆ ವಿವಾಹ ಸಮಾರಂಭದಲ್ಲಿ ಪಾಲ್ಗೋಂಡು ವಧು ವರರನ್ನು ಪರಮೇಶ್ವರ್ ಆಶೀರ್ವದಿಸಿದರು. ಪರಮೇಶ್ವರ್ ಸರ್ಕಾರವನ್ನ ಪ್ರತಿನಿಧಿಸಿದರೋ, ಅಥವಾ ಪಕ್ಷದ ಪ್ರತಿನಿಧಿಯಾಗಿ ಬಂದ್ದಿದ್ದರೋ ಎಂಬುದು ಎಲ್ಲೆಡೆ ಚರ್ಚೆಗೆ ಅವಕಾಶ ಮಾಡಿದೆ.
ಪಕ್ಷದ ಆದೇಶವಿದ್ದರೂ, ಎಲ್ಲವನ್ನ ಮೀರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮಂಗಳವಾರ ರಾತ್ರಿ ಮತ್ತು ಬುಧವಾರ ಬೆಳಗ್ಗೆ ರೆಡ್ಡಿ ಪುತ್ರಿ ವಿವಾಹಕ್ಕೆ ಹಾಜರಾಗಿದ್ದರು.
ರಾಜ್ಯಪಾಲ ವಜೂಬಾಯಿ ವಾಲಾ, ಇಂಧನ ಸಚಿವ ಡಿ.ಕೆ ಶಿವಕುಮಾರ್, ಶಾಸಕರಾದ ಕೊಂಡಯ್ಯ ಸೇರಿದಂತ ಹಲವು ರಾಜಕೀಯ ನಾಯಕರು ರೆಡ್ಡಿ ಪುತ್ರಿ ವಿವಾಹಕ್ಕೆ ಆಗಮಿಸಿದ್ದರು. ಗೃಹ ಸಚಿವ ಜಿ. ಪರಮೇಶ್ವರ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದು ಎಲ್ಲರ ಕುತೂಹಲಕ್ಕೆ ಕಾರಣವಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


