ರಾಜ್ಯ

ಬಳ್ಳಾರಿ ಬಳಿ ಟ್ರ್ಯಾಕ್ಸ್ ಗೆ ಸರ್ಕಾರಿ ಬಸ್ ಡಿಕ್ಕಿ, ನಾಲ್ವರು ಸ್ಥಳದಲ್ಲೇ ಸಾವು

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ವೊಂದು ಎದುರುಗಡೆಯಿಂದ ಬರುತ್ತಿದ್ದ ಟ್ರ್ಯಾಕ್ಸ್ ವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು...

ಬಳ್ಳಾರಿ ಬಳಿ ಟ್ರ್ಯಾಕ್ಸ್ ಗೆ ಸರ್ಕಾರಿ ಬಸ್ ಡಿಕ್ಕಿ, ನಾಲ್ವರು ಸ್ಥಳದಲ್ಲೇ ಸಾವು
ಸಾಂದರ್ಭಿಕ ಚಿತ್ರ
Published On :
ಬಳ್ಳಾರಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ವೊಂದು ಎದುರುಗಡೆಯಿಂದ ಬರುತ್ತಿದ್ದ ಟ್ರ್ಯಾಕ್ಸ್ ವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಹಾಗೂ ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಹುಲವತ್ತಿ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ದಾವಣಗೆರೆಯಿಂದ ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂಗೆ ತೆರಳುತ್ತಿದ್ದ ಟ್ರ್ಯಾಕ್ಸ್ ಗೆ ರಾಯಚೂರಿನಿಂದ ಭದ್ರಾವತಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಟ್ರ್ಯಾಕ್ಸ್ ನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯ ನಂತರ ಬಸ್ ಚಾಲಕ ಸ್ಥಳದಲ್ಲಿಯೇ ಬಸ್ ಬಿಟ್ಟು ಪರಾರಿಯಾಗಿದ್ದಾನೆ,
ಮೃತರು ಬಕೌಸರ್ ಬಾನು(32), ನೌಸೀಯಾ ಬಾನು(55), ಮೆಹಬೂಬ್ ಬಾಷಾ(50) ಹಾಗೂ ನೂರ್ ಅಹ್ಮದ್(42) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಈ ಸಂಬಂಧ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.