ಬರಪೀಡಿತ ಕರ್ನಾಟಕದಲ್ಲಿ ಮತ್ತಷ್ಟು ಹರಿಯಲಿದೆ ಮದ್ಯದ ಹೊಳೆ
ಮುಂಬರುವ ಹೊಸ ವರ್ಷ ಮದ್ಯಪ್ರಿಯರಿಗೆ ಮತ್ತಷ್ಟು ಖುಷಿ ತರಲಿದೆ. ರಾಜ್ಯದ 224 ವಿಧಾನ ಸಭೆ ಕ್ಷೇತ್ರಗಳಲ್ಲಿ ಪ್ರತಿ ಕ್ಷೇತ್ರಕ್ಕೆ 4 ಅಂಗಡಿಗಳಂತೆ, ಮೈಸೂರು ಸೇಲ್ಸ್ ...

ಬೆಳಗಾವಿ: ಮುಂಬರುವ ಹೊಸ ವರ್ಷ ಮದ್ಯಪ್ರಿಯರಿಗೆ ಮತ್ತಷ್ಟು ಖುಷಿ ತರಲಿದೆ. ರಾಜ್ಯದ 224 ವಿಧಾನ ಸಭೆ ಕ್ಷೇತ್ರಗಳಲ್ಲಿ ಪ್ರತಿ ಕ್ಷೇತ್ರಕ್ಕೆ 4 ಅಂಗಡಿಗಳಂತೆ, ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಮೂಲಕ 900 ಮದ್ಯದ ಅಂಗಡಿಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ.
ತಮ್ಮ ತವರು ಜಿಲ್ಲೆ ಹಾಸನದಲ್ಲಿ ಎಂಎಸ್ ಐಎಲ್ ಮಳಿಗೆ ಆರಂಭಿಸಲು ವಿಳಂಭವಾಗುತ್ತಿರುವ ಬಗ್ಗೆ ಚರ್ಚೆ ನಡೆಸಿದರು. ಎಂಎಸ್ ಐಎಲ್ ಮಳಿಗೆ ತೆರೆಯದ ಕಾರಣ ಅನಧಿಕೃತ ಸಾರಾಯಿ ಅಂಗಡಿಗಳಲ್ಲಿ ಹೆಚ್ಚಿನ ದರ ವಿಧಿಸಲಾಗುತ್ತಿದೆ ಎಂದು ಆರೋಪಿಸಿದರು. ಇದಕ್ಕೆ ಉತ್ತರಿಸಿದ ಅಬಕಾರಿ ಸಚಿವ ಎಚ್ ವೈ ಮೇಟಿ 2014-15ನೇ ಸಾಲಿನಲ್ಲಿ 16, 2015-16ನೇ ಸಾಲಿನಲ್ಲಿ 6 ಮಾರಾಟ ಮಳಿಗೆ ತೆರೆಯಲಾಗಿತ್ತು. ಜಿಲ್ಲಾಧಿಕಾರಿಗಳು ಮತ್ತು ಅಬಕಾರಿ ಇಲಾಖೆ ಮೂಲಕ ಸರ್ವೆ ಮಾಡಿಸಿ ಅಗತ್ಯವೆಂದು ಕಂಡು ಬಂದ ಜಾಗಗಳನ್ನು ಗುರುತಿಸಿ ಹೊಸದಾಗಿ 900 ಸಗಟು ಮಾರಾಟ ಮಳಿಗೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಕಳೆದ ವರ್ಷ 464 ಮಾರಾಟ ಮಳಿಗೆಗಳನ್ನು ಮಂಜೂರು ಮಾಡಲಾಗಿತ್ತು ಆದರೆ 40 ಸಹ ಪ್ರಾರಂಭವಾಗಿಲ್ಲ ಎಂದರು.
ರಾಜ್ಯದಲ್ಲಿ ಗಂಭೀರ ಬರ ಪರಿಸ್ಥಿತಿ ಇದೆ. ಜನರಿಗೆ ಕುಡಿಯಲು ನೀರಿಲ್ಲ. ಆದರೆ, ಸರ್ಕಾರ ಮದ್ಯ ಕುಡಿಸಿ ವ್ಯಾಪಾರ ಹೆಚ್ಚು ಮಾಡಿಕೊಳ್ಳಲು ಯತ್ನಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ತರಾಟೆಗೆ ತೆಗೆದುಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


