ರಾಜ್ಯ

ಮಾನನಷ್ಟ ಮೊಕದ್ದಮೆ: ಗೌರಿ ಲಂಕೇಶ್ ಗೆ 6 ತಿಂಗಳು ಜೈಲು ಶಿಕ್ಷೆ

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಅವರು ತಪ್ಪಿತಸ್ಥೆ ಎಂದು ಸೋಮವಾರ ಕೋರ್ಟ್ ತೀರ್ಪು ನೀಡಿದೆ.

ಮಾನನಷ್ಟ ಮೊಕದ್ದಮೆ: ಗೌರಿ ಲಂಕೇಶ್ ಗೆ 6 ತಿಂಗಳು ಜೈಲು ಶಿಕ್ಷೆ
ಗೌರಿ ಲಂಕೇಶ್
Published On :
ಹುಬ್ಬಳ್ಳಿ: ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಅವರು ತಪ್ಪಿತಸ್ಥೆ ಎಂದು ಸೋಮವಾರ ಕೋರ್ಟ್ ತೀರ್ಪು ನೀಡಿದೆ.
ಧಾರವಾಡ ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆ ನಡೆಸಿದ 2ನೇ ಜೆಎಂಎಫ್‌ಸಿ ಕೋರ್ಟ್, ಗೌರಿ ಲಂಕೇಶ ಅವರಿಗೆ 6 ತಿಂಗಳ ಜೈಲು ಶಿಕ್ಷೆ ಹಾಗೂ 10 ಸಾವಿರ ರುಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಗೌರಿ ಲಂಕೇಶ್‌ ಅವರು 2008, ಜನವರಿ 23ರಂದು ತಮ್ಮ ಪತ್ರಿಕೆಯಲ್ಲಿ ಸಂಸದ ಪ್ರಹ್ಲಾದ್ ಜೋಶಿ ಹಾಗೂ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಉಮೇಶ್ ದುಷಿ ಅವರ ವಿರುದ್ಧ ಅವಹೇಳನಕಾರಿಯಾಗಿ ಲೇಖನ ಪ್ರಕಟಿಸಿದ್ದರು. ಈ ಸಂಬಂಧ ಇಬ್ಬರೂ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು.
ಪ್ರಕರಣದ ಸುದೀರ್ಘ 8 ವರ್ಷಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ಅಮರ್ ಅವರು ಅವರು ದೂರುದಾರರಾದ ಪ್ರಹ್ಲಾದ್ ಜೋಶಿ ಹಾಗೂ ಉಮೇಶಗೆ ತಲಾ 5 ಸಾವಿರ ರುಪಾಯಿ ದಂಡ ನೀಡಬೇಕು ಎಂದು ಆದೇಶ ನೀಡಿದ್ದಾರೆ. ಒಂದು ವೇಳೆ ದಂಡ ಕಟ್ಟದಿದ್ರೆ ಹೆಚ್ಚುವರಿಯಾಗಿ ಒಂದು ತಿಂಗಳು ಶಿಕ್ಷೆ ಅನುಭವಿಸಬೇಕು ಎಂದು ಹೇಳಿದ್ದಾರೆ.
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಗೌರಿ ಲಂಕೇಶ್ ಅವರು ಜಾಮೀನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ನನಗೆ ಇದೊಂದು ತಾತ್ಕಾಲಿಕ ಹಿನ್ನೆಡೆಯಾಗಿದೆ. ಪತ್ರಿಕೋದ್ಯಮದಲ್ಲಿ ಇದೆಲ್ಲ ಸಹಜ.‌ ಇದನ್ನು ಪ್ರಶ್ನಿಸಿ ಹೈಕೋರ್ಟ್‌‌‌ನಲ್ಲಿ ಮೇಲ್ಮನವಿ ಸಲ್ಲಿಸುತ್ತೇನೆ. ಅದಕ್ಕೆ ಕಾನೂನಿನಲ್ಲಿ ಅವಕಾಶವಿದೆ. ಕೆಲವರು ನಾನು ಜೈಲಿಗೆ ಹೋಗುತ್ತೇನೆ ಎಂದು ಆಶಿಸಿದ್ದರು. ಆದ್ರೆ ನನಗೆ ಜಾಮೀನು ಸಿಕ್ಕಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.