ಹುತಾತ್ಮ ಮೇಜರ್ ಅಕ್ಷಯ್ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮನ
ಜಮ್ಮು ಮತ್ತು ಕಾಶ್ಮೀರದ ನಗ್ರೋಟಾದಲ್ಲಿ ಉಗ್ರರು ನಡೆಸಿದ ದಾಳಿಯಲ್ಲು ಹುತಾತ್ಮರಾದ ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಅವರು ಪಾರ್ಥೀವ ಶರೀರವನ್ನು ಗುರುವಾರ ನಗರಕ್ಕೆ ಕರೆತರಲಾಗಿದೆ...

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ನಗ್ರೋಟಾದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಹುತಾತ್ಮರಾಗಿದ್ದ ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಅವರ ಪಾರ್ಥೀವ ಶರೀರವನ್ನು ಗುರುವಾರ ನಗರಕ್ಕೆ ಕರೆತರಲಾಗಿದೆ.
ಅಕ್ಷಯ್ ಅವರ ಪಾರ್ಥೀವ ಶರೀರವನ್ನು ಯಲಹಂಕದ ವಾಯುನೆಲೆಗೆ ಈಗಾಗಲೇ ಕರೆತಲಾಗಿದ್ದು, ಇಂದು ಮಧ್ಯಾಹ್ನ 12.30ಕ್ಕೆ ಯಲಹಂಕದಲ್ಲಿರುವ ಅವರ ನಿವಾಸಕ್ಕೆ ಪಾರ್ಥೀರ ಶರೀರವನ್ನು ರವಾನೆ ಮಾಡಲಾಗುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಯಲಹಂಕದ ವಾಯುನೆಲೆಯಲ್ಲಿ ಮೇಜರ್ ಅಕ್ಷಯ್ ಕುಮಾರ್ ಅವರಿಗೆ ವಾಯುಸೇನೆ ಅಂತಿಮ ಗೌರವವನ್ನು ಸಲ್ಲಿಸಿದ್ದು. ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಾದಹಳ್ಳಿ ಬಳಿಯ ಅವರ ಅಪಾರ್ಟ್ ಮೆಂಟ್ ಬಳಿ ಕುಟುಂಬ ಸದಸ್ಯರಿಗೆ ಅಂತಿಮ ನಮನಕ್ಕೆ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ. ಸಂಜೆ 4.30ರ ಬಳಿಕ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


